ಹುಬ್ಬಳ್ಳಿ:ನೇಹಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಕುಟುಂಬದ ಹಾಗೂ ಎಲ್ಲ ಹೋರಾಟಗಾರರ ಒತ್ತಡಕ್ಕೆ ಮಣಿದು ಸರ್ಕಾರ ಇಂತಹದೊಂದು ನಿರ್ಧಾರ ತೆಗೆದುಕೊಂಡಿರುವುದಕ್ಕೆ ಸಿಎಂ ಸಿದ್ಧರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಮೃತಳ ತಂದೆ ನಿರಂಜನಯ್ಯ ಹಿರೇಮಠ ಹೇಳಿದರು.
ಸರ್ಕಾರ ನೇಹಾಳ ಕೊಲೆಯನ್ನು ಸಿಐಡಿಗೆ ಒಪ್ಪಿಸಿದ ಬೆನ್ನಲ್ಲೇ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಡಿಸಿಎಂ ನನ್ನ ಜೊತೆ ದೂರವಾಣಿ ಮೂಲಕ ಮಾತನಾಡಿದ್ದರು. ಸಿಐಡಿ ತನಿಖೆಗೆ ಡಿಸಿಎಂ ಬಳಿ ಡಿಮ್ಯಾಂಡ್ ಮಾಡಿದ್ದೇ. ಸರಕಾರದ ನಿರ್ಧಾರದಿಂದ ಸಂತೋಷವಾಗಿದೆ.ಸಿಐಡಿ ತನಿಖೆಯಿಂದ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಇನ್ನೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರನ್ನು ಕೂಡಲೇ ವರ್ಗಾವಣೆ ಮಾಡಿ ಖಡಕ್ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು. ಯಾರದೋ ಒತ್ತಡಕ್ಕೆ ಒಳಗಾಗುವ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿದರು.