ಹುಬ್ಬಳ್ಳಿ: ನೇಹಾ ನಿರಂಜನ ಹಿರೇಮಠ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡುವಳಿಕೆ ಬಗ್ಗೆ ಸರಿ ಇರದ ಕಾರಣ ಭಾರತೀಯ ಜನತಾ ಪಕ್ಷ ಹೋರಾಟ ಹಮ್ಮಿಕೊಳ್ಳಲಾಗಿತ್ತು. ನಂತರ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಕೊಟ್ಟಿದ್ದು ಇದನ್ನ ಸಹ ನಿಧಾನಗತಿಯಿಂದ ನಡೆದಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ನೇಹಾ ನಿರಂಜನ ಹಿರೇಮಠ ಅವರ ಬಿಡ್ನಾಳದ ನಿವಾಸದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ಯಾವುದೇ ಕಾರಣಕ್ಕೋ ಇದರಲ್ಲಿ ರಾಜಕಾರಣ ಬೆರೆಸುವುದಿಲ್ಲ. ಆದ್ದರಿಂದ ಸರ್ಕಾರ ಗಂಭೀರ ಪ್ರಮಾಣದಲ್ಲಿ ತೆಗೆದುಕೊಳ್ಳಬೇಕು ಎಂದರು.
ಯಾವುದೇ ರೀತಿಯ ಜಾತಿ ಧರ್ಮದ ಬಣ್ಣ ಹಚ್ಚುವುದು ಸರಿಯಲ್ಲ. ದಿನದಿಂದ ಪ್ರಕರಣಗಳು ಹೆಚ್ಚಾಗುತಿದ್ದು, ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಇಲ್ಲದಂತಾಗಿದೆ. ಕೊಲೆ ಮಾಡಿದವರು ಯಾವುದೇ ಜಾತಿಯವರಾಗಿದ್ದರೂ ಕೂಡ ಕಠಿಣ ಶಿಕ್ಷೆ ಕೈಗೊಳ್ಳಬೇಕಿದೆ ಎಂದು ಅವರು ಹೇಳಿದರು.