ಹುಬ್ಬಳ್ಳಿ: ನ್ಯಾಯದಾನ ವಿಳಂಬ ಆಗಬಾರದೆಂದು ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನ ಮಾಡಲಾಗಿದೆ. ಇವತ್ತು ಉಚ್ಛ ನ್ಯಾಯಾಲಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ ಪತ್ರ ತಲುಪುತ್ತದೆ. ತಪ್ಪಿಗಸ್ತರಿಗೆ ಸೂಕ್ತ ಶಿಕ್ಷೆ ಆಗಬೇಕಿದೆ. ಅನಿವಾರ್ಯ ಕಾರಣದಿಂದ ಸಿಎಂ ಇಲ್ಲಿಗೆ ಬರಲಾಗಿಲ್ಲ. ಇವತ್ತು ನಿರಂಜನ್ ಹಿರೇಮಠ್ ಜೊತೆ ಸಿಎಂ ಮಾತನಾಡಿದ್ದಾರೆ. ಸಿಎಂ ಸಾಂತ್ವನ ಹೇಳಿದ್ದಾರೆ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.
ನಿರಂಜನಯ್ಯ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಿರೇಮಠ ಅವರಿಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ. ಬಹುಬೇಗ ನೇಹಾಳ ಸಾವಿಗೆ ನ್ಯಾಯ ಸಿಗುತ್ತದೆ. ಬರ್ಬರ ಹತ್ಯೆಗೆ ಸಮಾಜದ ಮುಖಂಡರ ಭೇಟಿ ವೇಳೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆಗ್ರಹ ವ್ಯಕ್ತವಾಗಿತ್ತು. ಹೀಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನಿಸಿದ್ದೇವೆ. ನಾವು ಸಾಂತ್ವನ ಹೇಳಲು ಬಂದಿದ್ದೇವೆ. ನಮ್ಮ ಕರ್ತವ್ಯ ನಿಭಾಯಿಸಿ ನಾವು ಅವರ ಮನೆಗೆ ಬಂದಿದ್ದೇವೆ ಎಂದರು.
ವೈಯಕ್ತಿಕ ಘಟನೆ ಎಂಬ ಹೇಳಿಕೆ ಕುರಿತು ಗೃಹ ಸಚಿವ ಮತ್ತು ಸಿಎಂ ತಮ್ಮ ಸಮಾಜಯಿಸಿ ಹೇಳಿದ್ದಾರೆ ಎಂದು
ಸಚಿವ ಎಚ್. ಕೆ. ಪಾಟೀಲ್ ಹೇಳಿದರು.