ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಮಾಡಿರುವ ಆರೋಪಿಯನ್ನು ಆರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಒಂದನೇ ಅಧಿಕ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ಹುಬ್ಬಳ್ಳಿಯ ನ್ಯಾಯಾಲಯ ಆದೇಶ ಹೊರಡಿಸಿದೆ.
ಹೌದು.. ಬಿವ್ಹಿಬಿ ಕಾಲೇಜಿನಲ್ಲಿಯೇ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿದ್ದ ವಿದ್ಯಾನಗರದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ರಾಜ್ಯದಲ್ಲಿ ಸಾಕಷ್ಟು ಒತ್ತಡ ಬಂದ ಬೆನ್ನಲ್ಲೇ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿತ್ತು. ಈಗ ನ್ಯಾಯಾಲಯವು ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.