ಹುಬ್ಬಳ್ಳಿ: ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
ಹೌದು..ಸಿಎಂ ಆಗಮನಕ್ಕೂ ಮುನ್ನವೇ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ನಗರದ ಬಿಡ್ನಾಳದಲ್ಲಿರುವ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು, ನೇಹಾ ಹಿರೇಮಠ ಪೋಷಕರೊಂದಿಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ನೇಹಾ ಕುಟುಂಬಸ್ಥರಿಂದ ಸಿಐಡಿ ಅಧಿಕಾರಿಗಳ ಮಾಹಿತಿ ಕಲೆ: ಮನೆಯಿಂದ ನಿರ್ಗಮಿಸಿದ ಅಧಿಕಾರಿಗಳು
ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಹಾ ಹಿರೇಮಠ ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಹೌದು.. ರಾಜ್ಯ ಸರ್ಕಾರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಸಿಐಡಿ ಅಧಿಕಾರಿಗಳು ಇಂದು ನೇಹಾ ಹಿರೇಮಠ ಮನೆಗೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್, ಎಸ್ಪಿ ವೆಂಕಟೇಶ ನೇತೃತ್ವದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಮಾಹಿತಿ ಪಡೆದುಕೊಂಡಿದ್ದಾರೆ.
ಇನ್ನೂ ನಿನ್ನೆಯಷ್ಟೇ ಫಯಾಝ್ ನನ್ನು ಬಿವ್ಹಿಬಿಗೆ ಕರೆತಂದಿದ್ದ ಅಧಿಕಾರಿಗಳು ಸ್ಥಳ ಮಹಜರು ಮಾಡಿ ಅಗತ್ಯ ದಾಖಲೆಗಳನ್ನು ಪಡೆದುಕೊಂಡಿದ್ದು, ಈಗ ನೇಹಾ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಿದರು.