ಹುಬ್ಬಳ್ಳಿ: ಮೊನ್ನೆಯಷ್ಟೇ ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನೇಹಾಳ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮುಂದಾಗಿದ್ದಾರೆ.
ಹೌದು.. ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಸಚಿವ ಸಂತೋಷ ಲಾಡ್, ವಿನೋದ ಅಸೂಟಿ ಸಾಥ್ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಇನ್ನೂ ಹುಬ್ಬಳ್ಳಿ ಹಾಗೂ ಗದಗ ಜಿಲ್ಲೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರು ಕಾಂಗ್ರೆಸ್ ಕಾರ್ಪೋರೆಟರ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ನೇಹಾ ಹಿರೇಮಠ ಭಾವಚಿತ್ರಗೆ ಗೌರವ ಸಲ್ಲಿಸಿದ ಸಿದ್ಧರಾಮಯ್ಯ
ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರು, ನೇಹಾ ತಂದೆ ತಾಯಿಗೆ ಸಾಂತ್ವನ ಹೇಳಿದ ಬಳಿಕ ನೇಹಾ ಭಾವಚಿತ್ರಕ್ಕೆ ಪುಷ್ಪ ಅರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಹೌದು.. ಬಿಡನಾಳದಲ್ಲಿರುವ ಮನೆಯಲ್ಲಿ ಹಾಕಲಾಗಿದ್ದ ನೇಹಾ ಹಿರೇಮಠ ಭಾವಚಿತ್ರಕ್ಕೆ ಸಿಎಂ ಸಿದ್ಧರಾಮಯ್ಯ, ಸಚಿವ ಸಂತೋಷ ಲಾಡ್, ಎಚ್.ಕೆ.ಪಾಟೀಲ, ವಿನೋದ ಅಸೂಟಿ ಸೇರಿದಂತೆ ಕಾಂಗ್ರೆಸ್ ನಾಯಕರು ಗೌರವ ಸಮರ್ಪಣೆ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.