ಹುಬ್ಬಳ್ಳಿ; ಮೊನ್ನೆಯಷ್ಟೇ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ಧರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಕಮೀಷನರೇಟ್ ನಿಂದ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಹೌದು.. ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ಧರಾಮಯ್ಯನವರು ಸುಮಾರು 11-30ಕ್ಕೆ ಆಗಮಿಸಲಿದ್ದು, ಸೆಕ್ಯೂರಿಟಿ ಹೈ ಅಲರ್ಟ್ ಘೋಷಣೆ ಮಾಡಿದ್ದು, ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಇನ್ನೂ ಬೆಂಗಳೂರಿನಿಂದ ತಡಸ ಗ್ರಾಮದ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸಿಎಂ ಸಿದ್ಧರಾಮಯ್ಯನವರು, ನೇಹಾ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.