Search

CHAMARAJANAGAR: ಗ್ರಾಮಸ್ಥರಿಂದ ಚಾಮರಾಜನಗರದ ಮತಗಟ್ಟೆ ದ್ವಂಸ

ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದ ಬಳಿಯ ಮತಗಟ್ಟೆಯನ್ನು ಗ್ರಾಮಸ್ಥರು ದ್ವಂಸಗೊಳಿಸಿದ ಘಟನೆ ನಡೆದಿದೆ.‌ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದ ಬಳಿಯ ಇಂಡಿಗನಟ್ಟ ಗ್ರಾಮದ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ.‌

ಮೂಲಸೌಕರ್ಯ ಕೊರತೆ ಹಿನ್ನೆಲೆ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಐದು ಗ್ರಾಮಗಳ ಗ್ರಾಮಸ್ಥರು ಮತದಾನವನ್ನು ಬಹಿಷ್ಕರಿಸಿದ್ದರು. ಈ ಸಂಬಂಧ ಮಹಿಳೆಯರು ಮತಗಟ್ಟೆ ಬಳಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಅಧಿಕಾರಿಗಳು ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದರು. ಆದರೆ ಗ್ರಾಮಸ್ಥರ ಮನವೊಲಿಕೆಗೆ ಅಧಿಕಾರಿಗಳು ಯತ್ನಿಸಿದರೂ ಪ್ರಯೋಜನವಾಗಿಲ್ಲ. ಸಿಟ್ಟಿಗೆದ್ದ ಗ್ರಾಮಸ್ಥರು ಮತಗಟ್ಟೆ ನುಗ್ಗಿ ದಾಂದಲೆ ನಡೆಸಲು ಯತ್ನಿಸಿದರು. ಮತಗಟ್ಟೆ ಮೇಲೆ ಕಲ್ಲು ತೂರಾಟ ನಡೆಸಿದ ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದರು.

ಮತಗಟ್ಟೆಯನ್ನು ದ್ವಂಸ ಮಾಡಿ ತಮ್ಮ ಸಿಟ್ಟು ಪ್ರದರ್ಶಿಸಿದರು. ಈ ವೇಳೆ ಅಧಿಕಾರಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯ ಮತಗಟ್ಟೆಯಲ್ಲಿ ಬಿಗುವಿನ ವಾತಾವರಣ ಇದೆ.

More News

You cannot copy content of this page