Search

PRAJWAL REVANNA PENDRIVE CASE: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ; ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಗೆ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಯ ಹೊಣೆಯನ್ನ ಎಸ್ಐಟಿಗೆ ವಹಿಸುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ ಬೆನ್ನಲ್ಲೇ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ

ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡದಲ್ಲಿ ಸಹಾಯಕ ಪೊಲೀಸ್ ಮಹಾ ನಿರ್ದೇಶಕಿ ಸುಮನ್ ಡಿ ಪೆನ್ನೇಕರ್, ಮೈಸೂರು ಜಿಲ್ಲಾ ಎಸ್.ಪಿ ಸೀಮಾ ಲಾಟ್ಕರ್ ಅವರನ್ನೊಳಗೊಂಡಂತೆ ಎಸ್ಐಟಿ ತಂಡ ರಚಿಸಲಾಗಿದೆ. ಹಾಗೂ ಈ ಕುರಿತು ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ವರದಿಯಾದ, ವರದಿಯಾಗಲಿರುವ ಪ್ರಕರಣಗಳನ್ನ ಎಸ್ಐಟಿ ತನಿಖೆ ನಡೆಸಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಪ್ರಕರಣದ ಹಿನ್ನೆಲೆ
ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಹಲವು ವಿಡಿಯೊಗಳ ಪೆನ್ ಡ್ರೈವ್ ಗಳು ಹಾಸನದ ಕೆಲವೆಡೆ ದೊರೆತಿದ್ದು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಂಥಹ ಸಾವಿರಾರು ವಿಡಿಯೋಗಳಿವೆ ಎಂದು ಹೇಳಲಾಗಿದೆ. ಪ್ರಜ್ವಲ್ ರೇವಣ್ಣ ಅವರು ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸೂಕ್ತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.

More News

You cannot copy content of this page