ಬೆಂಗಳೂರು. ವಿಹಾರಕ್ಕೆ ತೆರಳಿದ್ದ ಐವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲರೂ ಬೆಂಗಳೂರಿನ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈ ದುರಂತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿನಿಯರು ಮತ್ತು ಮೂವರು ವಿದ್ಯಾರ್ಥಿಗಳು ಜಲ ಸಮಾಧಿಯಾಗಿದ್ದಾರೆ. ಇಂದು ಮಧ್ಯಾಹ್ನ ಈ ದುರಂತ ಸಂಭವಿಸಿದೆ. ಮನೆಯಲ್ಲಿ ತಿಳಿಸದೆ ಎಲ್ಲ ವಿದ್ಯಾರ್ಥಿಗಳು ಮೇಕೆದಾಟಿಗೆ ಬಂದಿದ್ದಾರೆ ಎಂದು ಶಂಕಿಸಲಾಗಿದೆ. ಇದೀಗ ಐವರು ವಿದ್ಯಾರ್ಥಿಗಳ ಮೃತದೇಹಗಳನ್ನು ನೀರಿನಿಂದ ಹೊರತೆಗೆಯಲಾಗಿದೆ. ಮೃತ ವಿದ್ಯಾರ್ಥಿಗಳ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ