Search

PRAJWAL REVANNA PENDRIVE CASE: ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಮೈತ್ರಿ ಅಭ್ಯರ್ಥಿಗಳಿಗೆ ತೊಡಕಿಲ್ಲ: ಜೋಶಿ

ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಮೈತ್ರಿ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಪ್ರಜ್ವಲ್ ರೇವಣ್ಣ ವೈಯಕ್ತಿಕವಾಗಿ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ ಎಂದು ಪ್ರತಿಕ್ರಿಯಿಸಿದರು.

ವೈಯಕ್ತಿಕವಾಗಿ ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕ್ರಮವಾಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇದೆ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಲಿ ಎಂದು ಹೇಳಿದರು.

More News

You cannot copy content of this page