ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಮಹಿಳಾ ಘಟಕದಿಂದ ಹುಬ್ಬಳ್ಳಿಯಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದರು.
ಇನ್ನು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ದಿಂದ ಪಾದಯಾತ್ರೆ ಮೂಲಕ ಬಂದ ಪ್ರತಿಭಟನೆ ಮಾಡಿದ ನೂರಾರು ಮಹಿಳೆಯರು, ಪ್ರಜ್ವಲ ರೇವಣ್ಣನ ವಿರುದ್ಧ ಘೋಷಣೆ ಕೂಗುತ್ತ ಆತನಿಗೆ ಕಠಿಣ ಶಿಕ್ಷೆಯಾಗಬೇಕು ಮಹಿಳೆಯರನ್ನು ರಕ್ಷಿಸಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ಹೊರ ಹಾಕಿದರು.