ಕಲಬುರಗಿ- ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವೇಳೆ ಅಸ್ವಸ್ಥರಾಗಿರುವ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್‌ರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಕಲಬುರಗಿಯ ಜಯದೇವ ಆಸ್ಪತ್ರೆಯಲ್ಲಿ ಜಾಧವ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಉಮೇಶ್ ಜಾಧವ್‌ರ ಆರೋಗ್ಯ ವಿಚಾರಿಸಿದ್ದಾರೆ.
ಸ್ಥಳೀಯ ಬಿಜೆಪಿ ಮುಖಂಡರು ವಿಜಯೇಂದ್ರ ಅವರಿಗೆ ಸಾಥ್ ನೀಡಿದ್ದಾರೆ.
ಮುಂಜಾನೆ ಕಲಬುರಗಿ ಬಳಿ ನಡೆದ ಪ್ರತಿಭಟನೆಯಲ್ಲಿ ಸಂಸದ ಉಮೇಶ್ ಜಾಧವ್ ಭಾಗಿಯಾಗಿದ್ದರು.
ಮನೆ ಮೇಲೆ ದಾಳಿ ನಡೆಸಿದ್ದ ಘಟನೆ ಖಂಡಿಸಿ ಕಲಬುರಗಿ ಹೊರವಲಯದಲ್ಲಿ ಗುಂಪೊಂದು ಪ್ರತಿಭಟನೆ ನಡೆಸಿತ್ತು.
ಇದೀಗ ಪರಿಣಿತ ವೈದ್ಯರು ಸಂಸದ ಉಮೇಶ್ ಜಾಧವ್ ಅವರ ಆರೋಗ್ಯ ಪರಿಸ್ಥಿತಿ ಕುರಿತು ಸತತ ನಿಗಾವಹಿಸಿದೆ.
ಉಮೇಶ್ ಜಾಧವ್ , ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರು ಜಾಧವ್ ಅವರ ಎದುರಾಳಿಯಾಗಿದ್ದಾರೆ.
ಡಾ. ಉಮೇಶ್ ಜಾಧವ್ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಶೀಘ್ರದಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ
ಡಾ. ಉಮೇಶ್ ಜಾಧವ್ ಅವರು ಮೊದಲ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿ ಅಚ್ಚರಿ ಮೂಡಿಸಿದ್ದರು