ಹುಬ್ಬಳ್ಳಿ: ಪ್ರಜ್ವಲ್ ರೇವಣ್ ಪ್ರಕರಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿದೆ. ಆರು ತಿಂಗಳ ಹಿಂದೆಯೇ ಇದರ ಬಗ್ಗೆ ಮಾಹಿತಿ ಇದ್ದರೂ ಮೈತ್ರಿ ಮಾಡಿಕೊಂಡಿದ್ದು, ಪ್ರಜ್ವಲ್ ರೇವಣನ ಪ್ರಕರಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟವಾಗಿ ಜನರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕು ಎಂದು ಯುಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ಸರ್ಕಾರ ಎಸ್ ಐ ಟಿಗೆ ಕೊಟ್ಟಿದೆ. ಈ ಬಗ್ಗೆ ಎಲ್ಲವೂ ತನಿಖೆ ನಡೆಯುತ್ತಿದೆ. ಇಂತಹ ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಬಿಜೆಪಿಗೆ ಮಾಹಿತಿ ಇದ್ದರೂ ಕೂಡ ಮೈತ್ರಿ ಮಾಡಿಕೊಂಡಿರುವುದನ್ನು ನೋಡಿದರೇ ನಿಜಕ್ಕೂ ಬಿಜೆಪಿಯ ಬಗ್ಗೆ ನಾಚಿಕೆ ಬರುತ್ತದೆ ಎಂದರು.
ಇನ್ನೂ ರಾಜ್ಯಾದ್ಯಂತ ಕಾಂಗ್ರೆಸ್ ಇಷ್ಟು ದೊಡ್ಡಮಟ್ಟದ ವಿರೋಧ ಮಾಡಿದರೂ ಬಿಜೆಪಿ ಸುಮ್ಮನಿರುವುದನ್ನು ನೋಡಿದರೇ ಇದರಲ್ಲಿ ಬಿಜೆಪಿಯ ಕೈವಾಡ ಇದೆ ಎಂದು ಗೊತ್ತಾಗುತ್ತದೆ ಎಂದು ಅವರು ಹೇಳಿದರು.