ಕಲಬುರಗಿ: ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಆರೋಪ ಇದೀಗ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಿಶೇಷ ತನಿಖಾ ದಳ ರಚಿಸಿರುವ ರಾಜ್ಯ ಸರ್ಕಾರ ಇದೀಗ ಈ ನಿಟ್ಟಿನಲ್ಲಿ ಹೊಸ ತಂತ್ರದ ಮೊರೆ ಹೋಗಿದೆ. ಪ್ರಜ್ವಲ್ ರೇವಣ್ಣ ಬಂಧನಕ್ಕೆ ರಾಜ್ಯ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಕಲಬುರಗಿಯಲ್ಲಿ ರಾಜ್ಯ ಗೃಹ ಸಚಿವ ಪರಮೇಶ್ವರ್ ಮಹತ್ವದ ಈ ಮಾಹಿತಿ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಈಗಾಗಲೇ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್‌ಗೆ ಹೆಚ್ಚಿನ ಸಮಯಾವಕಾಶ ನೀಡಲು ಸಾಧ್ಯ ಇಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಪ್ರಕರಣದ ಎ-1 ಆರೋಪಿಯಾಗಿರುವ ರೇವಣ್ಣ, ವಿಶೇಷ ತನಿಖಾದಳದ ಮುಂದೆ ಹಾಜರಾಗದಿದ್ದರೆ ಅವರನ್ನು ಬಂಧಿಸಬೇಕಾಗುತ್ತದೆ ಎಂದು ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ರೇವಣ್ಣ ವಿಚಾರಣೆಗೆ ಹಾಜರಾಗುವ ವಿಶ್ವಾಸವನ್ನು ಪರಮೇಶ್ವರ್ ವ್ಯಕ್ತಪಡಿಸಿದ್ದಾರೆ. ಪ್ರಕರಣ ಸಂಬಂಧ ಸಂತ್ರಸ್ತೆ ಮಹಿಳೆ ಹೇಳಿಕೆ ದಾಖಲಿಸಿದ್ದಾರೆ. ನಿನ್ನೆ ಕೂಡ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಸಂತ್ರಸ್ತೆಯರು ಭಯ ಇಲ್ಲದೆ ಪೊಲೀಸರಿಗೆ ದೂರು ಕೊಡಬೇಕು. ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರ ಎಲ್ಲ ರಕ್ಷಣೆ ನೀಡಲಿದೆ ಎಂದು ಪರಮೇಶ್ವರ್ ಭರವಸೆ ನೀಡಿದ್ದಾರೆ. ಹೆಚ್ ಡಿ ರೇವಣ್ಣ ಬಂಧನವಾದರೆ, ಅದು ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಹೆಚ್ಚಾಗಿದೆ
ಇನ್ನೊಂದೆಡೆ ಪ್ರಕರಣ ಖಂಡಿಸಿ ಇಂದು ಕೂಡ ರಾಜ್ಯದ ವಿವಿಧೆಡೆ ಮಹಿಳ ಾಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ.