POCSO CASE: ನವನಗರ ಠಾಣೆ ವ್ಯಾಪ್ತಿಯಲ್ಲಿ ಪೋಕ್ಸೋ: ಆರೋಪಿಯ ಬಂಧನ, ಕಮೀಷನರ್ ಹೇಳಿಕೆ..!

ಹುಬ್ಬಳ್ಳಿ: ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಬಗ್ಗೆ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಹೇಳಿದರು. ನವನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಇಂದು 4.30ಕ್ಕೆ ಕಿಮ್ಸ್ ಆಸ್ಪತ್ರೆಯಿಂದ ಎಂಎಲ್ ಸಿ ಕೇಸ್ ರೇಪರ್ ಆಗಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಆಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ನಾವು ಕೂಡಲೆ ಪೋಕ್ಸೋ ಅಡಿ ಪ್ರಕರಣ ದಾಖಲು ಮಾಡಿದ್ದೇವೆ ಎಂದರು. ಪ್ರಕರಣದ […]

HD Kumaraswamy: ಮಾಜಿ ಪ್ರಧಾನಮಂತ್ರಿ ಮಗನಾ ಇವನು? ರಾಹುಲ್ ಗಾಂಧಿಗೆ ತಕ್ಷಣವೇ SIT ನೊಟೀಸ್ ಕೊಡಲು ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ರಾಯಚೂರು: ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಕ್ಷಣವೇ ವಿಶೇಷ ತನಿಖಾ ದಳ (SIT) ನೊಟೀಸ್ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಆಗ್ರಹಪಡಿಸಿದರು. ಇಷ್ಟು ಕರಾರುವಕ್ಕಾಗಿ, ಅಂಕಿ ಅಂಶಗಳ ಸಮೇತ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ. ಈ ಸರಕಾರಕ್ಕೆ ಗಂಡಸ್ತನ, ತಾಕತ್ತು ಎನ್ನುವುದು ಇದ್ದರೆ ಈ ಕೂಡಲೇ ಆತನಿಗೆ ತನಿಖಾ ದಳದಿಂದ ಕೂಡಲೇ ನೋಟಿಸ್ […]

COMPLAINT AGAINST RAJU KAGE: ಶಾಸಕ ರಾಜುಕಾಗೆ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಶಾಸಕ ರಾಜು ಕಾಗೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗದ ಕದ ತಟ್ಟಿದೆ. ರಾಜು ಕಾಗೆ ನೀಡಿರುವ ವಿವಾದಾತ್ಮಕ ಹೇಳಿಕೆ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ನೇತೃತ್ವದ ನಿಯೋಗ ದೂರು ನೀಡಿದೆ. ಮಾಜಿ ಶಾಸಕ ನಂದೀಶ್ ರೆಡ್ಡಿ ನೇತೃತ್ವದ ನಿಯೋಗ ಈ ಸಂಬಂಧ ದೂರು ನೀಡಿದೆ. ವೋಟ್ ನೀಡದಿದ್ರೆ ಕರೆಂಟ್ ಕಟ್ ಎಂಬ ಹೇಳಿಕೆಯನ್ನು ರಾಜು ಕಾಗೆ ನೀಡಿದ್ದರು. ಇದು ಮತದಾರರನ್ನು ಬೆದರಿಸುವ ತಂತ್ರ ಎಂದು ಬಿಜೆಪಿ ಆರೋಪಿಸಿದೆ. ಹೇಳಿಕೆ ನೀಡಿರುವ ರಾಜು ಕಾಗೆ ವಿರುದ್ಧ […]

HD Kumaraswamy: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನನ್ನ , ದೇವೇಗೌಡ ಪಾತ್ರ ಇಲ್ಲ- ಕುಮಾರಸ್ವಾಮಿ

ಸಿಂಧನೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತ ಮಾಜಿ ಸಿಎಂ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸುದೀರ್ಘವಾದ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಇಡೀ ಪ್ರಕರಣದಲ್ಲಿ ದೇವೇಗೌಡರದ್ದಾಗಲೀ , ನನ್ನ ಪಾತ್ರವಾಗಲಿ ಏನು ಇಲ್ಲ. ನೆಲದ ಕಾನೂನಿನಂತೆ ತನಿಖೆ ನಡೆಯಲಿ. ಸೂಕ್ತ ತನಿಖೆಯಾಗಲಿ. ತನಿಖೆಯಲ್ಲಿ ತಪ್ಪಿತಸ್ಥ ಎಂದು ಕಂಡುಬಂದರೇ ಶಿಕ್ಷೆಯಾಗಲಿ ಎಂದು ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ.ಇಡೀ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನಡೆಯನ್ನು […]

CHAMARAJANAGAR: ಗ್ರಾಮದಲ್ಲಿ ಕೇವಲ ಬೂಟುಗಳ ಸದ್ದು, ಜನರೇ ಇಲ್ಲ

ಚಾಮರಾಜನಗರ: ಮೊದಲ ಹಂತದ ಚುನಾವಣೆ ನಡೆದ ಏ,26ರಂದು ಹಿಂಸಾಚಾರಸಂಭವಿಸಿದ್ದ ಚಾಮರಾಜನಗರ ಜಿಲ್ಲೆಯ ಇಂಡಿಗನತ್ತ ಗ್ರಾಮದಲ್ಲಿ ಇದೀಗ ನೀರವ ಮೌನ ನೆಲೆಸಿದೆ.ಪೊಲೀಸರಿಗೆ ಹೆದರಿ ಗ್ರಾಮದ ಬಹುತೇಕ ಮಂದಿ ಗ್ರಾಮ ತೊರೆದಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ಬಹಿಷ್ಕಾರದ ಮಧ್ಯೆ ಒಂದು ಗುಂಪು ಮತದಾನ ಮಾಡಲು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿ ಹಿಂಸಾಚಾರ ಸಂಭವಿಸಿತ್ತು.ತಹಶೀಲ್ದಾರ್ ಮೇಲೆ ಹಲ್ಲೆ ನಡೆದಿತ್ತು. ಇವಿಎಂ ಯಂತ್ರಗಳನ್ನು ಧ್ವಂಸಗೊಳಿಸಲಾಗಿತ್ತು. ಇದೀಗ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ ನಡೆದಿದ್ದರೂ ಹಿಂಸಾಚಾರದ ಗಾಯ […]

BENGALURU RAINS: ಬೆಂಗಳೂರಿನಲ್ಲಿ 2ನೇ ದಿನವೂ ಮಳೆ

ಬೆಂಗಳೂರು: ರಾಜ್ಯ ರಾಜಧಾನಿ ಮೇಲೆ ವರುಣ ದೇವ ಕೃಪೆ ತೋರಿದ್ದಾನೆ. ಬರೋಬರಿ 160ಕ್ಕೂ ಹೆಚ್ಚು ದಿನಗಳ ಬಳಿಕ ರಾಜಧಾನಿಗೆ ಮಳೆಯ ಆಗಮನವಾಗಿದೆ. ಬಿಸಿಲ ಬೇಗೆಯಿಂದ ತತ್ತರಿಸುತ್ತಿರುವ ಸಿಲಿಕಾನ್ ನಗರದ ಜನರಿಗೆ ಸ್ವಲ್ಮ ನೆಮ್ಮದಿಯಾಗಿದೆ.ಗುರುವಾರ ಸಂಜೆ ನಗರದ ಬಹುತೇಕ ಪ್ರದೇಶಗಳಲ್ಲಿ ಮಳೆ ಸುರಿದಿತ್ತು. ಇದೀಗ ಎರಡನೆ ದಿನವಾದ ಇಂದು ಕೂಡ ಮಳೆಯಾಗುತ್ತಿದೆ. ಬೆಂಗಳೂರಿನ ಟೌನ್ ಹಾಲ್, ಕೆ. ಆರ್. ಮಾರ್ಕೇಟ್, ಮೆಜೆಸ್ಟಿಕ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರದಲ್ಲಿ ಮಳೆಯಾಗುತ್ತಿದೆ. ಅನೇಕಲ್‌ನಲ್ಲಿ ಮಳೆ ಸುರಿಯುತ್ತಿದೆ. ಹೆಬ್ಬಗೋಡಿಯಲ್ಲಿ ಕೂಡ ಮಳೆಯಾಗಿದೆ. ಗುಡುಗು ಸಹಿತ […]

RAHUL GANDI FILES NOMINATION: ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರಪ್ರದೇಶದ ರಾಯಬರೇಲಿ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.ತಾಯಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಹೋದರಿ ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಕೇರಳದ ವಯನಾಡ್ ಬಳಿಕ ಇದೀಗ ಎರಡನೆ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸುತ್ತಿದ್ದಾರೆ.ರಾಯಬರೇಲಿ ಕ್ಷೇತ್ರದಿಂದ ರಾಹುಲ್ ಸ್ಪರ್ಧೆ, ಆಡಳಿತಾರೂಢ ಬಿಜೆಪಿಗೆ ಕಾಂಗ್ರೆಸ್ ನೀಡಿರುವ ಸ್ಪಷ್ಟ ಸಂದೇಶ ಎಂದೇ ಹೇಳಲಾಗುತ್ತಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಉತ್ತರಪ್ರದೇಶದ ಫಲಿತಾಂಶ ನಿರ್ಣಾಯಕವಾಗಿದ್ದು, ರಾಜ್ಯದಲ್ಲಿ ಸಮಾಜವಾದಿ ಪಕ್ಷದೊಂದಿಗೆ ಕಾಂಗ್ರೆಸ್ […]

G PARAMESHWAR: ಸಂತ್ರಸ್ತೆಯಿಂದ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ: ಸಚಿವ ಪರಮೇಶ್ವರ

ಬೆಂಗಳೂರು (ಮೇ 3):- ಸಂಸದ‌ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯೊಬ್ಬರು ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ಎಸ್ಐಟಿಯವರು ಒತ್ತಾಯಪೂರ್ವಕವಾಗಿ ಆಕೆಯಿಂದ ಸ್ಟೇಟ್ಮೆಂಟ್ ಪಡೆದುಕೊಂಡಿದ್ದಾರೆ ಎಂಬ ಆರೋಪ ಯಾರಿಂದಲೂ ಬಾರದು. ಹೀಗಾಗಿ ಮ್ಯಾಜಿಸ್ಟ್ರೇಟ್ ಮುಂದೆಯೇ 164 ಅಡಿ ಹೇಳಿಕೆ ಕೊಡಿಸಲಾಗಿದೆ ಎಂದರು. ಪ್ರಜ್ವಲ್ […]

PM MODI VISIT AYODHYA: ಮೇ5ರಂದು ಅಯೋಧ್ಯೆಗೆ ಮೋದಿ ಭೇಟಿ

ನವದೆಹಲಿ: ದೇಶದಲ್ಲಿ ಸಾರ್ವತ್ರಿಕ ಚುನಾವಣೆಯ ಪ್ರಚಾರ ಮುಗಿಲು ಮುಟ್ಟಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅಯೋಧ್ಯೆಗೆ ಭೇಟಿ ನೀಡಲು ತೀರ್ಮಾನಿಸಿದ್ದಾರೆ. ಮೇ5ರಂದು ಪ್ರಧಾನಿ ಮೋದಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಬಾಲರಾಮನ ದರ್ಶನ ಪಡೆಯಲಿರುವ ಮೋದಿ, ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಸಾರ್ವತ್ರಿಕ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ಮೋದಿ ಮುಖ್ಯವಾಗಿ ಅಯೋಧ್ಯೆ ರಾಮ ಮಂದಿರದ ಕುರಿತು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.ದೇಶದ ಉದ್ದಗಲ್ಲಕ್ಕೂ ನಡೆದ ಪ್ರಚಾರ ಸಭೆಯಲ್ಲಿ ಮೋದಿ , ಬಿಜೆಪಿಯ ಸಂಕಲ್ಪ ಶಕ್ತಿಯಿಂದ ಮಾತ್ರ ಅಯೋಧ್ಯೆಯಲ್ಲಿ ರಾಮ ಮಂದಿರ […]

Rahul Gandhi Contest From Rae Barely: ರಾಯಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ

ನವದೆಹಲಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕೈ ನಾಯಕ ರಾಹುಲ್ ಗಾಂಧಿ ಇದೀಗ ಉತ್ತರಪ್ರದೇಶದ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ರಾಹುಲ್ ಗಾಂಧಿ ಅವರ ಹೆಸರನ್ನು ಅಂತಿಮಗೊಳಿಸಿದೆ. ರಾಯಬರೇಲಿ ಕ್ಷೇತ್ರದಿಂದ ಈ ಹಿಂದೆ ಸೋನಿಯಾ ಗಾಂಧಿ ಸ್ಪರ್ಧಿಸಿದ್ದರು. ಉತ್ತರಪ್ರದೇಶದ ಅಮೇಥಿ ಮತ್ತು ರಾಯಬರೇಲಿ ಕ್ಷೇತ್ರಗಳು ಕಾಂಗ್ರೆಸ್‌ನ ಗಾಂಧಿ ಕುಟುಂಬದ ಸಾಂಪ್ರದಾಯಿಕ ಲೋಕಸಭಾ ಕ್ಷೇತ್ರಗಳಾಗಿವೆ. ಈ ಎರಡೂ ಕ್ಷೇತ್ರಗಳ ಜೊತೆ ಗಾಂಧಿ ಕುಟುಂಬಕ್ಕೆ ನಿಕಟವಾದ ಸಂಬಂಧ ಇದೆ. ಇದೀಗ […]

You cannot copy content of this page