Search

COMPLAINT AGAINST RAJU KAGE: ಶಾಸಕ ರಾಜುಕಾಗೆ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಶಾಸಕ ರಾಜು ಕಾಗೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗದ ಕದ ತಟ್ಟಿದೆ. ರಾಜು ಕಾಗೆ ನೀಡಿರುವ ವಿವಾದಾತ್ಮಕ ಹೇಳಿಕೆ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ನೇತೃತ್ವದ ನಿಯೋಗ ದೂರು ನೀಡಿದೆ. ಮಾಜಿ ಶಾಸಕ ನಂದೀಶ್ ರೆಡ್ಡಿ ನೇತೃತ್ವದ ನಿಯೋಗ ಈ ಸಂಬಂಧ ದೂರು ನೀಡಿದೆ. ವೋಟ್ ನೀಡದಿದ್ರೆ ಕರೆಂಟ್ ಕಟ್ ಎಂಬ ಹೇಳಿಕೆಯನ್ನು ರಾಜು ಕಾಗೆ ನೀಡಿದ್ದರು. ಇದು ಮತದಾರರನ್ನು ಬೆದರಿಸುವ ತಂತ್ರ ಎಂದು ಬಿಜೆಪಿ ಆರೋಪಿಸಿದೆ. ಹೇಳಿಕೆ ನೀಡಿರುವ ರಾಜು ಕಾಗೆ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ.
ಇದೇ ವೇಳೆ ಸುರಪುರ ಬಿಜೆಪಿ ಅಭ್ಯರ್ಥಿ ರಾಜು ಗೌಡ ಸಹೋದರನ ಮೇಲೆ ನಡೆದ ಹಲ್ಲೆಯನ್ನು ಬಿಜೆಪಿ ಖಂಡಿಸಿದೆ. ಈ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ನಿಯೋಗ ಆಗ್ರಹಿಸಿದೆ. ಮೀಸಲಾತಿ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ಹೇಳಿಕೆ ಕುರಿತಂತೆ ಕೂಡ ಬಿಜೆಪಿ ನಿಯೋಗ ರಾಜ್ಯ ಚುನಾವಣಾ ಆಯೋಗದ ಗಮನ ಸೆಳೆದಿದೆ.
ಮತದಾನ ಅವಧಿ ಹೆಚ್ಚಿಸಲು ಮನವಿ
2ನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿರುವ ರಾಜ್ಯದ ಉತ್ತರ ಕರ್ನಾಟಕ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತದಾನ ಅವಧಿ ವಿಸ್ತರಿಸಬೇಕು ಎಂದು ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಮತದಾನ ಅವಧಿಯನ್ನು ಒಂದು ಗಂಟೆ ಹೆಚ್ಚಿಸುವಂತೆ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಬಿಜೆಪಿ ಮಾಡಿರುವ ಮನವಿ ಕುರಿತಂತೆ ಚುನಾವಣಾ ಆಯೋಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಈ ಮಧ್ಯೆ ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿಯಲ್ಲಿ ಪ್ರಚಾರ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಬಿರುಸಿನ ಪ್ರಚಾರ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಲಿಂಬಾಳ್ಕರ್ ಪರ ಸಿಎಂ ಮತಯಾಚನೆ ನಡೆಸಿದರು.
ಇದೇ ವೇಳೆ ಶಿರಸಿಯಲ್ಲಿ ಕಾಂಗ್ರೆಸ್ ಬೆಂಬಲಿತ ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರು ಉದ್ಯಮಿಗಳ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ

More News

You cannot copy content of this page