ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯೋರ್ವನು ಶವವು ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ಕಾರವಾರ ರಸ್ತೆಯಲ್ಲಿ ನಡೆದಿದೆ.
ವ್ಯಕ್ತಿಯ ಶವವು ಸುಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದ್ದು, ಪೊಲೀಸರ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಅಲ್ಲದೇ 35-40 ವಯಸ್ಸಿನ ಆಸುಪಾಸಿನಲ್ಲಿರುವ ವ್ಯಕ್ತಿ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಹಳೇ ಹುಬ್ಬಳ್ಳಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ವ್ಯಕ್ತಿ ಬಗ್ಗೆ ಹಾಗೂ ಘಟನೆಯ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.