ನವದೆಹಲಿ: ದೇಶದಲ್ಲಿ ಸಾರ್ವತ್ರಿಕ ಚುನಾವಣೆಯ ಪ್ರಚಾರ ಮುಗಿಲು ಮುಟ್ಟಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅಯೋಧ್ಯೆಗೆ ಭೇಟಿ ನೀಡಲು ತೀರ್ಮಾನಿಸಿದ್ದಾರೆ. ಮೇ5ರಂದು ಪ್ರಧಾನಿ ಮೋದಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಬಾಲರಾಮನ ದರ್ಶನ ಪಡೆಯಲಿರುವ ಮೋದಿ, ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಸಾರ್ವತ್ರಿಕ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ಮೋದಿ ಮುಖ್ಯವಾಗಿ ಅಯೋಧ್ಯೆ ರಾಮ ಮಂದಿರದ ಕುರಿತು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.
ದೇಶದ ಉದ್ದಗಲ್ಲಕ್ಕೂ ನಡೆದ ಪ್ರಚಾರ ಸಭೆಯಲ್ಲಿ ಮೋದಿ , ಬಿಜೆಪಿಯ ಸಂಕಲ್ಪ ಶಕ್ತಿಯಿಂದ ಮಾತ್ರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ , ಅಯೋಧ್ಯೆಯಲ್ಲಿ ರಾಮ ಮಂದಿರದ ವಿರೋಧಿಯಾಗಿತ್ತು. ರಾಮ ಮಂದಿರ ನಿರ್ಮಾಣವನ್ನು ಕಾಂಗ್ರೆಸ್ ಬಯಸಿರಲಿಲ್ಲ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು. ಕರ್ನಾಟಕದ ಮೇ 7ರಂದು 2ನೇ ಹಂತದ ಲೋಕಾ ಚುನಾವಣೆ ನಡೆಯಲಿದ್ದು, ಇತರ ಜೊತೆಗೆ ಇತರ ರಾಜ್ಯಗಳ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಅಯೋಧ್ಯೆ ಪ್ರವಾಸ ರಾಜಕೀಯ ಮಹತ್ವ ಪಡೆದುಕೊಂಡಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರಪ್ರದೇಶದ ರಾಯಬರೇಲಿ ಲೋಕಾ ಕ್ಷೇತ್ರದಿಂದ ಸ್ಪರ್ಧಿಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮ ಮಂದಿರವನ್ನು ಚುನಾವಣಾ ಪ್ರಚಾರದಲ್ಲಿ ಪ್ರಮುಖವಾಗಿ ಪ್ರಸ್ತಾಪಿಸಲು ಮೋದಿ ತೀರ್ಮಾನಿಸಿದ್ದಾರೆ.
ಅಯೋಧ್ಯೆ ರಾಮ ಮಂದಿರ ಬಿಜೆಪಿಗೆ ಭಾವನಾತ್ಮಕ ವಿಷಯವಾಗಿದ್ದು, ಬಿಜೆಪಿ ಬಲ ವರ್ಧನೆಯಲ್ಲಿ ರಾಮ ಮಂದಿರ ಆಂದೋಲನ ಪ್ರಮುಖ ಪಾತ್ರ ವಹಿಸಿದೆ. ಇದೀಗ ಮತ್ತೊಮ್ಮೆ ಬಾಲರಾಮನ ದರ್ಶನದ ಬಳಿಕ ಮತ್ತೊಮ್ಮೆ ಚುನಾವಣೆಯಲ್ಲಿ ರಾಮ ಮಂದಿರ ಅಸ್ತ್ರ ಬಳಸಲು ಬಿಜೆಪಿ ಮುಂದಾಗಿದೆ. ಬಿಜೆಪಿಯ ಈ ರಣತಂತ್ರಕ್ಕೆ ಮತದಾರರು ಮನ್ನಣೆ ನೀಡಲಿದ್ದಾರೆಯೇ ಎಂಬುದು ಜೂನ್ 4ರಂದು ಗೊತ್ತಾಗಲಿದೆ.
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಆಮಂತ್ರಣವನ್ನು ಕಾಂಗ್ರೆಸ್ ನಿರಾಕರಿಸಿತ್ತು. ಮಂದಿರಕ್ಕೆ ಭೇಟಿ ನೀಡುವುದರಿಂದ ದೂರ ಉಳಿದಿತ್ತು. ಈಗಾಗಲೇ ಬಿಜೆಪಿ ಈ ವಿಷಯವನ್ನು ಚುನಾವಣಾ ಸಭೆಗಳಲ್ಲಿ ಪ್ರಮುಖವಾಗಿ ಪ್ರಸ್ತಾಪಿಸಿದೆ.