ಹುಬ್ಬಳ್ಳಿ: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಏಳೆನೇ ತಾರೀಕು ನಡೆಯಲಿದೆ. ಕಳೆದ ಒಂದು ವಾರದಿಂದ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದೇನೆ. ನಮ್ಮ ನಿರೀಕ್ಷೆಗೆ ಮೀರಿದ ಜನಸ್ಪಂದನೆ ದೊರೆತಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಜನ ಸಂಕಲ್ಪ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ ದಿಂದ ದೇಶಕ್ಕೆ ಒಳಿತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು, ಎಲ್ಲ ಕ್ಷೇತ್ರದಲ್ಲಿ ಉತ್ಸಾಹದಿಂದ ದುಡಿಯುತ್ತಿದ್ದಾರೆ. ಎರಡನೇ ಹಂತದಲ್ಲಿಯೂ ಎಲ್ಲ ಕ್ಷೇತ್ರದಲ್ಲಿ ಬಿಜೆಪಿ ಗೆದ್ದೆ ಗೆಲ್ಲುತ್ತದೆ. ಆದರೇ ಕಾಂಗ್ರೆಸ್ ಸರ್ಕಾರ ಒಂದು ವಾರದ ವಿದ್ಯಮಾನದಲ್ಲಿ ಸಿಎಂ, ಡಿಸಿಎಂ ಗ್ಯಾರಂಟಿ ಬಗ್ಗೆ ಮರೆತಿದ್ದಾರೆ. ಫೆನಡ್ರೈವ್ ಹಿಂದೆಯೇ ಬಿದ್ದಿದ್ದಾರೆ. ಘಟನೆಯ ಬಗ್ಗೆ ಬಿಜೆಪಿ ಪರವಾಗಿ ನಿಲ್ಲುವುದಿಲ್ಲ ಎಂದರು.
ಪ್ರಜ್ವಲ ರೇವಣ ಪ್ರಕರಣವನ್ನು ನಾವು ಯಾವತ್ತೂ ಬೆಂಬಲಿಸುವುದಿಲ್ಲ. ಕಾಂಗ್ರೆಸ್ಸಿಗೆ ತಮ್ಮ ಮೇಲೇಯೇ ತಮಗೆ ನಂಬಿಕೆ ಹೊರಟುಹೋಗಿದೆ. ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆತ್ಮಹತ್ಯೆ, ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿವೆ. ದಲಿತ ಹೆಣ್ಣುಮಗಳ ಮೇಲೆ ಸದ್ದಾಂಹುಸೇನ ಎಂಬುವವನು ನೀಚ ಕೃತ್ಯ ಎಸಗಿದ್ದಾನೆ. ಹೀಗಿದ್ದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿಕುಳಿತಿದೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದಾಗಲೂ ಮೀನಾಮೇಷ ಎಣಿಸುತ್ತಿದೆ. ಕೊಲೆಗಡಕರ ವಿರುದ್ಧ ಕ್ರಮಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಅಲ್ಪಸಂಖ್ಯಾತರ ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ ಕಾಂಗ್ರೆಸ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿರಾತಂಕವಾಗಿ ಲವ್ ಜಿಹಾದ್ ನಡೆಯುತ್ತಿವೆ. ಕೊಲೆಗಡಕರಿಗೆ ರಾಜ್ಯ ಸರ್ಕಾರವೇ ರಕ್ಷಣೆ ನೀಡುತ್ತಿದೆ. ತುಷ್ಟಿಕರಣದ ರಾಜಕಾರಣಕ್ಕೆ ಜನರೇ ತಕ್ಕ ಉತ್ತರ ಕೊಡ್ತಾರೆ. ಕಾಂಗ್ರೆಸ್ ಹಿಂದೂ ವಿರೋಧಿ ಸರ್ಕಾರ ಎಂದು ಜನರಿಗೆ ಗೊತ್ತಾಗಿದೆ ಎಂದ ಅವರು, ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜ್ವಲ್ ಪ್ರಕರಣದಂತಹ ಪ್ರಕರಣದಲ್ಲಿ ಬಿಜೆಪಿ ಯಾವುದೇ ಬೆಂಬಲ ನೀಡುವುದಿಲ್ಲ.ಬಿಜೆಪಿ ನಾಯಕರಿಗೆ ಯಾವುದೇ ಪತ್ರ ಬಂದಿಲ್ಲ.ಯಾವ ಪುಣ್ಯಾತ್ಮ ಹೇಳಿದ್ದಾನೋ ಅವರಿಗೆ ಕೇಳಿ ಎಂದರು.
ಕುಮಾರಸ್ವಾಮಿಯವರ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ರಾಜ್ಯಾಧ್ಯಕ್ಷರಿಗೆ ಯಾವುದೇ ಪತ್ರ ಬಂದಿಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.