LOK SABHA ELECTIONS: 2ನೇ ಹಂತದ ಮತದಾನಕ್ಕೆ ರಾಜ್ಯ ಸಜ್ಜು, ಆಖಾಡದಲ್ಲಿ ಅತಿರಥ ಮಹಾರಥರು

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕದನದ ಭಾಗವಾಗಿ ನಾಳೆ ಎರಡನೆ ಹಂತದ ಮತದಾನ ನಡೆಯಲಿದೆ. ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಕರ್ನಾಟಕದಲ್ಲಿ ವ್ಯಾಪಿಸಿರುವ ಲೋಕಸಭೆ ಕ್ಷೇತ್ರಗಳಿಗೆ ಬಿಗಿ ಭದ್ರತೆಯ ಮಧ್ಯೆ ಮತದಾನಕ್ಕೆ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೆಳಿಿಗ್ಗೆ ಏಳು ಗಂಟೆಯಿಂದ ಸಂಜೆ ಆರರ ತನಕ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬಿರು ಬಿಸಿಲಿನಿಂದ ರಕ್ಷಿಸಿಕೊಳ್ಳುವ ಸಲುವಾಗಿ ಮತದಾರರಿಗೆ ಶಾಮಿಯಾನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಚುನಾವಣಾ ಆಯೋಗ ಸೂಚನೆ ನೀಡಿದೆ.
ರಾಯಚೂರು, ಕಲಬುರಗಿ, ಯಾದಗಿರಿ, ವಿಜಯಪುರ, ಬಳ್ಳಾರಿಯಲ್ಲಿ ತಾಪಮಾನ ದಾಖಲೆ ಪ್ರಮಾಣ ತಲುಪಿದೆ. ಇದು ಮತದಾನ ಪ್ರಮಾಣದ ಮೇಲೆ ಪ್ರಭಾವ ಬೀರುವ ಆತಂಕ ಎದುರಾಗಿದೆ. ಇದನ್ನು ಮನಗಂಡಿರುವ ಚುನಾವಣಾ ಆಯೋಗ ಮತದಾರ ಸ್ನೇಹಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ

ನಾಳೆ ರಾಜ್ಯದ 14 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.
ಕೊಪ್ಪಳ, ಉತ್ತರಕನ್ನಡ, ಬೀದರ್​, ರಾಯಚೂರು, ಬಳ್ಳಾರಿ,
ಬಾಗಲಕೋಟೆ, ವಿಜಯಪುರ, ಕಲಬುರಗಿ
ಧಾರವಾಡ, ಬೆಳಗಾವಿ, ಚಿಕ್ಕೋಡಿ
ಶಿವಮೊಗ್ಗ, ದಾವಣಗೆರೆ, ಹಾವೇರಿ- ಗದಗ ಲೋಕಸಭಾ ಕ್ಷೇತ್ರದಲ್ಲಿ ನಾಳೆ ಮತದಾರರು ಅಭ್ಯರ್ಥಿಗಳ ಹಣೆ ಬರಹ ನಿರ್ಧರಿಸಲಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂಗಳಾದ ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಈಶ್ವರಪ್ಪ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್, ಮೊದಲ ಬಾರಿ ಅದೃಷ್ಟ ಪರೀಕ್ಷಿಸುತ್ತಿರುವ ಅಂಜಲಿ ನಿಂಬಾಳ್ಕರ್ ಕಣದಲ್ಲಿರುವ ಪ್ರಮುಖರಾಗಿದ್ದಾರೆ.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಖಾತರಿಪಡಿಸಲು ಚುನಾವಣಾ ಆಯೋಗ ಎಲ್ಲ ಕ್ರಮ ತೆೆಗೆದುಕೊಂಡಿದೆ. ಕೇಂದ್ರ ಮೀಸಲು ಪೊಲೀಸ್ ಪಡೆ, ನಾಗ ಪೊಲೀಸ್ ಪಡೆ ಸೇರಿದಂತೆ ಕೇಂದ್ರ ಸರ್ಕಾರ ಹೆಚ್ಚುವರಿ ಪಡೆಗಳನ್ನು ರಾಜ್ಕಕ್ಕೆ ಕಳುಹಿಸಿದೆ. ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ.
ಮತದಾನ ಮುಗಿದ ಬಳಿಕ ಜೂನ್ 4ರ ವರೆಗೆ ರಾಜ್ಯದಲ್ಲಿ ಒಂದು ರೀತಿಯ ರಾಜಕೀಯ ಮೌನ ಆವರಿಸಿಕೊಳ್ಳಲಿದೆ

More News

You cannot copy content of this page