ಹುಬ್ಬಳ್ಳಿ: ಪ್ರಜಾಪ್ರಭುತ್ವದ ಸಂಭ್ರಮ ಅಂದರೆ ನಿಜಕ್ಕೂ ಅದೊಂದು ದೊಡ್ಡ ಹಬ್ಬದಂತೆ ಒಂದೇ ಕುಟುಂಬದ 96 ಸದಸ್ಯರು ಮತದಾನ ಮಾಡಿದ್ದಾರೆ.ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ 96 ಜನ ಕುಟುಂಬಸ್ಥರು ಮತ ಚಲಾಯಿಸಿ ಇತರರಿಗೆ ಮಾದರಿಯಾಗಿದ್ದಾರೆ.
ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ 56,57 ರಲ್ಲಿ ಮತದಾನ ಮಾಡಿದ್ದು, ನೂಲ್ವಿ ಗ್ರಾಮದ ಕಂಟೆಪ್ಪ ತೋಟದ ಕುಟುಂಬದ ಸದಸ್ಯರಿಂದ ಮತದಾನ ಮಾಡಲಾಗಿದೆ. ಮತ ಚಲಾಯಿಸಿದ ಬಳಿಕ ಎಲ್ಲರೂ ಸೇರಿ ಸೆಲ್ಫಿ ಪಡೆದು ಸಂಭ್ರಮಿಸಿದ್ದಾರೆ.
ಮೂರು ತಲೆಮಾರಿನ ಕುಟುಂಬದ ಸದಸ್ಯರು ಮತದಾನದಲ್ಲಿ ಭಾಗಿಯಾಗಿದ್ದು, ಪ್ರತಿ ಚುನಾವಣೆಯಲ್ಲಿ ಮೂರು ತಂಡವಾಗಿ ವಾಹನ ಮೂಲಕ ಬಂದು ಮತ ಚಲಾವಣೆ ಮಾಡಿದ್ದರು. ಆದ್ರೇ ಈ ಚುನಾವಣೆಯಲ್ಲಿ ಏಕಕಾಲದಲ್ಲಿ ಬಂದು ಮತದಾನ ಮಾಡಿದ್ದಾರೆ.