ಬೆಂಗಳೂರು : ಹಾಸನ ಪೆನ್ ಬಿನ್ ನಲ್ಲೇ ಪ್ರಕರಣ ಇದೀಗ ತೀವ್ರ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ನಗರದ ಕೆಲವು ಕಡೆಗಳಲ್ಲಿ ಅವರ ವಿರುದ್ಧ ಪೋಸ್ಟರ್ ಅಭಿಯಾನ ನಡೆಸಲಾಗಿದೆ.
ನಗರದ ಲುಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ ಆಗಂತುಕರು ಪೋಸ್ಟರ್ ಅಂಟಿಸಿದ್ದಾರೆ.ಪೋಸ್ಟರ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧವೂ ಕಿಡಿಕಾರಲಾಗಿದೆ.
ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯವಾಗಿ ಸಾಕಷ್ಟು ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಪ್ರಮುಖ ವ್ಯಕ್ತಿ ಬಿಜೆಪಿ ಮುಖಂಡ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ.
ವಿಡಿಯೋ ಲೀಕ್ ಮಾಡಿರುವ ಹಿಂದೆ ಡಿಕೆ ಶಿವಕುಮಾರ್ ಇದ್ದಾರೆ ಎಂಬುದು ದೇವರಾಜೇಗೌಡ ಅವರ ಆರೋಪವಾಗಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿ ಆರೋಪಿಸಿದ್ದರು. ಆದರೆ ಇದನ್ನು ಡಿಕೆಶಿ ನಿರಾಕರಣೆ ಮಾಡಿದ್ದಾರೆ. ಪೆನ್ ಡ್ರೈವ್ ವಿಡಿಯೋ ಬಿಡುಗಡೆ ಹಿಂದೆ ಬಿಜೆಪಿ ಕೈವಾಡ ಇದೆ ಎಂದು ಅವರು ತಿರುಗೇಟು ನೀಡಿದ್ದಾರೆ.
ಹಿಂದೆ ಕಾಂಗ್ರೆಸ್ ಪೋಸ್ಟರ್ ಅಭಿಯಾನ ನಡೆಸಿತ್ತು
ಇನ್ನು ಬಿಜೆಪಿ ಸರ್ಕಾರದ ವಿರುದ್ಧ ಈ ಹಿಂದೆ ಕಾಂಗ್ರೆಸ್ ಕೂಡಾ ಪೋಸ್ಟರ್ ಅಭಿಯಾನ ನಡೆಸಿತ್ತು.40% ಸರ್ಕಾರ ಎಂಬ ಪೋಸ್ಟರ್ ಅಭಿಯಾನವನ್ನು ಬಿಜೆಪಿ ಸರ್ಕಾರ ನಡೆಸಿತ್ತು.ಇದು ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು.
ಪೊಲೀಸರಿಂದ ತೆರವು
ಇನ್ನು ಡಿಕೆ ಶಿವಕುಮಾರ್ ಹಾಗೂ ಸಿಎಂ ವಿರುದ್ಧದ ಪೋಸ್ಟರ್ ಅಭಿಯಾನದ ಹಿನ್ನೆಲೆಯಲ್ಲಿ ಹಾಕಲಾಗಿದ್ದ ಪೋಸ್ಟರ್ ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ.ಆದರೆ ಯಾರು ಇದನ್ನು ಹಾಕಿದ್ದಾರೆ ಎಂಬುದು ಗೊತ್ತಾಗಿಲ್ಲ.