ಹುಬ್ಬಳ್ಳಿ: ಆ್ಯಕ್ಸಿಸ್ ಬ್ಯಾಂಕ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿರುವ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಆ್ಯಕ್ಸಿಸ್ ಬ್ಯಾಂಕ್ ನಲ್ಲಿ ನಡೆದಿದೆ.
ಹೌದು..ಆ್ಯಕ್ಸಿಸ್ ಬ್ಯಾಂಕ್ ನಲ್ಲಿ ಕಾಣಿಸಿಕೊಂಡ ಅಪಾರ ಪ್ರಮಾಣದ ಹೊಗೆಯಿಂದ ಸಾರ್ವಜನಿಕರು ಆತಂಕಗೊಂಡಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ದೌಡು,ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ.
ಗಾಬರಿಯಿಂದ ಬ್ಯಾಂಕ್ ಕಟ್ಟಡದಿಂದ ಸಾರ್ವಜನಿಕರು ಹೊರ ಬಂದಿದ್ದು, ಹೊಗೆಯಿಂದ ಆತಂಕಗೊಂಡ ಜನರು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.