ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಅಶ್ಲೀಲ ವಿಡಿಯೋ ವೈರಲ್ ಮಾಡಿರುವ ಪ್ರಕಣ ಇದೀಗ ಎಸ್ಐಟಿಗೆ ವರ್ಗಾವಣೆಯಾಗಿದೆ.
ಕಾರ್ತಿಕ್ ಸೇರಿದಂತೆ ಹಲವರ ವಿರುದ್ಧ ದಾಖಲಾಗಿದ್ದ ಕೇಸ್ ಇದೀಗ ಎಸ್ಐಟಿಗೆ ವರ್ಗಾಯಿಸಲಾಗಿದೆ.
ಕಾರ್ತಿಕ್, ಪುಟ್ಟರಾಜ್, ನವೀನ್ ಗೌಡ ಮತ್ತು ಚೇತನ್ ಸಲ್ಲಿಸಿರುವ ಜಾಮೀನು ಅರ್ಜಿ ವಜಾಗೊಂಡಿದ್ದು, ಬಂಧನದ ಭೀತಿ ಎದುರಾಗಿದೆ.
ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿತ್ತು.
ಸಂಸದ ಪ್ರಜ್ವಲ್ ರೇವಣ್ಣ ಅವರ ಫೋಟೋ ವಿಡಿಯೋ ಎಡಿಟ್ ಮಾಡಿ ಅದನ್ನು ಪೆನ್ ಡ್ರೈವ್ ಮೂಲಕ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ.
ಕಾರ್ತಿಕ್, ಪುಟ್ಟರಾಜ್, ನವೀನ್ ಗೌಡ, ಶರತ್ ವಿರುದ್ಧ ಜೆಡಿಎಸ್ ನಾಯಕರು ದೂರು ನೀಡಿದ್ದರು.
ತಮ್ಮ ವಿರುದ್ದ ಕೇಸ್ ದಾಖಲಾಗುತ್ತಲೆ ನಿರೀಕ್ಷಣ ಜಾಮೀನಿಗೆ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಾಸನದ ಸ್ಥಳೀಯ ನ್ಯಾಯಾಲಯ ವಜಾ ಮಾಡಿತ್ತು.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಎಸ್‌ಐಟಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಎಸ್ಐಟಿ ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು. ರಾಜ್ಯಪಾಲರನ್ನು ಭೇಟಿ ಮಾಡಿ ಕುಮಾರಸ್ವಾಮಿ ಈ ಸಂಬಂಧ ದೂರು ಕೂಡ ನೀಡಿದ್ದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.