CONGRESS WILL WIN 20 CONSTITUENCIES: ಲೋಕಸಭೆ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ- ಸಚಿವ ಎಂ ಬಿ. ಪಾಟೀಲ್ ವಿಶ್ವಾಸ

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದೆ ಎಂಬ ವಿಶ್ವಾಸವನ್ನು ಸಚಿವ ಎಂ ಬಿ ಪಾಟೀಲ್ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಲೋಕಸಭಾ 7ಕ್ಷೇತ್ರ ವ್ಯಾಪ್ತಿಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದು ಇದು ಕಾಂಗ್ರೆಸ್‌ಗೆ ಅನುಕೂಲವಾಗಿರಲಿದೆ ಎಂದು ಎಂ ಬಿ ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಎಂ ಬಿ ಪಾಟೀಲ್ ರಾಜ್ಯದಲ್ಲಿ 20 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಲಿದೆ ಎಂದು ಹೇಳಿದ್ದಾರೆ.
ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ 1 ಲಕ್ಷ ಮತಗಳ ಅಂತರದಿಂದ ಗೆಲ್ಲಲಿದೆ ಎಂಬ ಭವಿಷ್ಯವನ್ನು ಎಂ ಬಿ ಪಾಟೀಲ್ ನೀಡಿದ್ದಾರೆ.
ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಪೆನ್ ಡ್ರೈವ್ ಪ್ರಕರಣ ಸಂಬಂದ ಪ್ರತಿಕ್ರಿಯಿಸಲು ಎಂ ಬಿ ಪಾಟೀಲ್ ನಿರಾಕರಿಸಿದ್ದಾರೆ . ಈ ಸಂಬಂಧ ತನಿಖೆಗೆ ಎಸ್ಐಟಿ ರಚನೆಯಾಗಿದೆ. ತನಿಖೆ ನಡೆಯುತ್ತಿದೆ. ಸಚಿವನಾಗಿ ಈ ಹಂತದಲ್ಲಿ ಹೇಳಿಕೆ ಸೂಕ್ತವಲ್ಲ ಎಂದು ಎಂ ಬಿ ಪಾಟೀಲ್ ಪ್ರತಿಕಿಯಿಸಿದ್ದಾರೆ.

ರಾಜ್ಯದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಸರ್ಕಾರ ಪತನವಾಗಲಿದೆ ಎಂಬ ಜೆಡಿಎಸ್ ನಾಯಕರ ಹೇಳಿಕೆಯನ್ನು ಎಂ ಬಿ ಪಾಟೀಲ್ ಲೇವಡಿ ಮಾಡಿದ್ದಾರೆ. ಸರ್ಕಾರ ಪತನಗೊಳಿಸಲು ಕನಿಷ್ಟ 60 ಶಾಸಕರ ಅಗತ್ಯ ಇದೆ. ಇಬ್ಬರು ಶಾಸಕರನ್ನು ಜೆಡಿಎಸ್ ಕರೆದುಕೊಂಡು ಹೋಗಲಿ. ಮೊದಲು ಅದನ್ನು ಮಾಡಿ ತೋರಿಸಲಿ ಎಂದು ಎಂ ಬಿ ಪಾಟೀಲ್ ಸವಾಲು ಹಾಕಿದ್ದಾರೆ.
ಚುನಾವಣಾ ಫಲಿತಾಂಶ ಹೊರ ಬಂದ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಪಾಟೀಲ್, ಸಂದರ್ಭಕ್ಕೆ ಅನುಗುಣವಾಗಿ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಸರ್ಕಾರ ಅಸ್ತಿತ್ವದಲ್ಲಿ ಇರುವ ಸಾಧ್ಯತೆ ಕಡಿಮೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಎಂ ಬಿ ಪಾಟೀಲ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಅಶೋಕ್ , ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪತನದ ಬಗ್ಗೆ ರಾಜಕೀಯ ಭವಿಷ್ಯ ನುಡಿದಿದ್ದರು.

More News

You cannot copy content of this page