ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಯೊಬ್ಬರ ಪತ್ನಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಚೈತ್ರಾಗೌಡ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ವಕೀಲರಾಗಿದ್ದ ಚೈತ್ರಾ ಗೌಡ ಅವರು ರೂಪದರ್ಶಿಯಾಗಿಯೂ ಹೆಸರು ಗಳಿಸಿದ್ದರು.
ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಣ್ಣಯ್ಯ ಲೇಔಟ್ ಮನೆಯಲ್ಲಿ ಚೈತ್ರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚ್ರೈತ್ರಾಗೌಡ, ಕೆಎಎಸ್ ಅಧಿಕಾರಿ ಶಿವಕುಮಾರ್ ಪತ್ನಿಯಾಗಿದ್ದಾರೆ. ಶಿವಕುಮಾರ್ ಕೆಐಎಡಿಬಿ ಸಹಾಯಕ ಆಯುಕ್ತ ರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಚೈತ್ರಾ ಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಚೈತ್ರಾ ಮೃತದೇಹ ಪತ್ತೆಯಾಗಿದೆ.
ಇದೀಗ ಚೈತ್ರಾ ಸಾವಿನ ಬಗ್ಗೆ ಅವರ ಕುಟುಂಬ ಸದಸ್ಯರು ಸಂಶಯ ವ್ಯಕ್ತಪಡಿಸಿದ್ದಾರೆ. ಪತಿ ಶಿವಕುಮಾರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಸಂಜಯನಗರ ಠಾಣೆ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಆರ್ಥಿಕವಾಗಿ ಅತ್ಯಂತ ಸುಭದ್ರ ಸ್ಥಿತಿಯಲ್ಲಿದ್ದ ಈ ಕುಟುಂಬದಲ್ಲಿ ಇದೀಗ ಆತ್ಮಹತ್ಯೆ ನಡೆದಿರುವುದು ಎಲ್ಲರನ್ನು ನಿಬ್ಬೆರಗುಮಾಡಿದೆ