ಬೆಂಗಳೂರು: ಪ್ರಜ್ವಲ್ ಹುಡುಕಿ ಕೊಟ್ಟವರಿಗೆ ಸಿಗಲಿದೆ ಒಂದು ಲಕ್ಷ ಬಹುಮಾನ ನೀಡಲಾಗುವುದು ಅಂಥ ಪಾರ್ಟಿ ಕಾರ್ಯಕರ್ತ ನಾಗೇಶ್ ಅವರು ಹೇಳಿದ್ದಾರೆ. ಇಂದು ಬೆಂಗಳೂರಿನ ಶಿವಾನಂದ ಸರ್ಕಲ್ ಸೇರಿದಂತೆ ನಾನಾ ಕಡೆ ಜನತಾ ಪಾರ್ಟಿಯಿಂದ ವಾಂಟೆಡ್ ಪೋಸ್ಟರ್ ಅನ್ನು ಹಚ್ಚುತ್ತಿದ್ದಾರೆ.
ಇದೇ ವೇಳೆ ಮಾತನಾಡಿದ ನಾಗೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಇನ್ನೂ ನಾಗೇಶ್ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನವರನ್ನು ಬಂಧಿಸಲುವಲ್ಲಿ ಯಶಸ್ವಿಯಾಗಿಲ್ಲ, ಈ ನಿಟ್ಟಿನಲ್ಲಿ ನಾವು ಅವರ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ಮತ್ತು ಸನ್ಮಾನ ಮಾಡುವುದಾಗಿ ಹೇಳಿದ್ದಾರೆ.