ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಬಂಧನಕ್ಕೆ ಕಾರಣವಾಗಿರುವ ಕೆ, ಆರ್. ನಗರದ ಸಂತ್ರಸ್ಥೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸತೀಶ್ ಬಾಬು ಅವರನ್ನು ಎಸ್‌ಐಟಿ ವಶಕ್ಕೆ ಒಪ್ಪಿಸಲಾಗಿದೆ.
ಎಸಿಎಂಎಂ ನ್ಯಾಯಾಲಯ ಈ ತೀರ್ಪು ನೀಡಿದೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಉಳಿದ ಮೂರು ಆರೋಪಿಗಳನ್ನು 14 ದಿನಗಳ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಾಲ್ವರು ಆರೋಪಿಗಳನ್ನ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಇಂದು ಹಾಜರುಪಡಿಸಲಾಗಿತ್ತು.
ಸಂತ್ರಸ್ರೆ ಕಿಡ್ನಾಪ್ ಗೆ ಸಹಕರಿಸಿದ್ದ ಆರೋಪ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮಧು,ಮನು,ಸುಜಯ್‌ರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದೇ ವೇಳೆ ಸತೀಶ್ ಬಾಬುಗೆ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಇದೇ ತಿಂಗಳ 16ನೇ ತನಕ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ.
ಇನ್ನೊಂದೆಡೆ ಹಾಸನದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ನಿವಾಸಕ್ಕೆ ಎಫ್ಎಸ್‌ಎಲ್ ತಂಡ ಭೇಟಿ ನೀಡಿದೆ. ಸತತ ನಾಲ್ಕು ಗಂಟೆಗಳ ಕಾಲ ಪ್ರಜ್ವಲ್ ನಿವಾಸದಲ್ಲಿ ತಂಡ ಪರಿಶೀಲನೆ ನಡೆಸಿದೆ.ದಾಖಲೆ ಸಂಗ್ರಹಿಸಿದೆ. ಹಾಸನ ನಿವಾಸದಲ್ಲಿ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎಫ್ಎಸ್ಎಲ್ ತಂಡ ಭೇಟಿ ನೀಡಿದೆ.
ಹೊಳೆನರಸೀಪುರದಲ್ಲಿರುವ ರೇವಣ್ಣ ನಿವಾಸಕ್ಕೆ ಕೂಡ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ತನಿಖಾಧಿಕಾರಿ ಸ್ವರ್ಣ ನೇತೃತ್ವದಲ್ಲಿ ಸಮಗ್ರ ಪರಿಶೀಲನೆ ನಡೆಸಲಾಗಿದೆ.
ಇದೇ ವೇಳೆ ಪರಪ್ಪನ ಅಗ್ರಹಾರ ಜೈಲಿಗೆ ಜಿ ಟಿ ದೇವೇಗೌಡ ಭೇಟಿ ನೀಡಿ ರೇವಣ್ಣ ಜೊತೆ ಮಾತುಕತೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಿ ಟಿ ದೇವೇಗೌಡ, ರೇವಣ್ಣ ಅವರ ವಿರುದ್ದ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಜಾಮೀನು ದೊರೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.