Search

DK SHIVAKUMAR: ದೇಶದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

ಬೆಂಗಳೂರು, ಮೇ 14: “ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದೆ. ಒಳ್ಳೆಯ ವಾತಾವರಣ ಕಾಣುತ್ತಿದ್ದು, ನಮ್ಮ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದರು.

ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಅವರು ಹೇಳಿದ್ದಿಷ್ಟು;

“ಮಹಾರಾಷ್ಟ್ರ ಮುಖ್ಯಮಂತ್ರಿ ಕರ್ನಾಟಕದಲ್ಲಿ ಆಪರೇಷನ್ ಮಾಡುವ ಬಗ್ಗೆ ಮಾತನಾಡಿದ್ದಾರೆ. ಅವರ ಸರ್ಕಾರವೇ ಬಿದ್ದು ಹೋಗುವ ಸ್ಥಿತಿಯಲ್ಲಿದೆ. ಎಲ್ಲಾ ರಿವರ್ಸ್ ಆಗಬಹುದು.

ಅಪಹರಣಕ್ಕೆ ಒಳಗಾದ ಮಹಿಳೆಯ ಆಡಿಯೋ ವಿಡಿಯೋ ಬಗ್ಗೆ ಕೇಳಿದಾಗ “ಇದಕ್ಕೆ ಎಸ್ ಐಟಿ ಉತ್ತರ ನೀಡುತ್ತದೆ. ಇದರ ಬಗ್ಗೆ ನನಗೆ ಏನು ಗೊತ್ತಿಲ್ಲ. ನನ್ನ ಹೆಸರು ಬಳಸಿಕೊಂಡರೆ ಮಾಧ್ಯಮಗಳು ಹಾಕುತ್ತಾರೆ ಎಂದು ಉಪಯೋಗಿಸಿಕೊಳ್ಳುತ್ತಿದ್ದಾರೆ” ಎಂದರು.

ಡಿ.ಕೆ. ಶಿವಕುಮಾರ್ ಕುತಂತ್ರ ಎಂದು ಅಶೋಕ್ ಮತ್ತು ಅಶ್ವಥ್ ನಾರಾಯಣ ಅವರ ಆರೋಪದ ಬಗ್ಗೆ ಕೇಳಿದಾಗ “ಇದಕ್ಕೆಲ್ಲಾ ಉತ್ತರ ಕೊಡೋಣ” ಎಂದರು.

ಹುಟ್ಟುಹಬ್ಬದ ಆಚರಣೆ ಬೇಡ

“ಚುನಾವಣೆ ಪ್ರಚಾರದ ನಿಮಿತ್ತ ನಾನು ಬೇರೆ ಊರಿಗೆ ತೆರಳುತ್ತಿದ್ದು ನನ್ನ ಹುಟ್ಟುಹಬ್ಬದ ಆಚರಣೆ ಬೇಡ ಎಂದು ಕಾರ್ಯಕರ್ತರು, ಮುಖಂಡರಿಗೆ ಮಾಧ್ಯಮಗಳ ಮೂಲಕ ಮನವಿ ಮಾಡಿದರು.

More News

You cannot copy content of this page