Sudden Fire In Airavata Bus: ಚಲಿಸುತ್ತಿದ್ದ ಐರಾವತ ಬಸ್‌ನಲ್ಲಿ ದಿಢೀರ್ ಬೆಂಕಿ, ಅಪಾಯದಿಂದ ಪಾರಾದ 40 ಪ್ರಯಾಣಿಕರು

ಚಿಕ್ಕಮಗಳೂರು: ಚಲಿಸುತ್ತಿದ್ದ ಐರಾವತ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ KA01F9077 ಐರಾವತ ಸೆಮಿ ಸ್ಲೀಪರ್ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಆಕಸ್ಮಿಕದಿಂದ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆದರೆ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.ತರೀಕೆರೆ ತಾಲೂಕಿನ ಅಜ್ಜಂಪುರ ಕ್ರಾಸ್ ಬಳಿ ಮಧ್ಯರಾತ್ರಿ ಘಟನೆ ಸಂಭವಿಸಿದೆ
ಶಿವಮೊಗ್ಗದಿಂದ ಮೈಸೂರಿಗೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ 40 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಬಸ್ ನಿಲ್ಲಿಸಿದ ಚಾಲಕ, ನಿದ್ದೆಯ ಮಂಪರಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಎಚ್ಚರಿಸಿ ಬಸ್‌ನಿಂದ ಕೆಳಗಿಳಿಸಿದ್ದಾನೆ. ಇದರಿಂದ ಪ್ರಯಾಣಿಕರು ಪ್ರಾಣ ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬಸ್ಸಿಗೆ ಬೆಂಕಿ ತಗುಲಿರುವ ಶಂಕೆವ್ಯಕ್ತವಾಗಿದೆ.
ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇನ್ನೊಂದೆಡೆ ಮಂಡ್ಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ.ಕೇರಳ ಮೂಲದ ಮೂವರಿಗೆ ಗಂಭೀರ ಗಾಯವಾಗಿದೆ. ಮಂಡ್ಯದ ಹನಕೆರೆ ಗ್ರಾಮದ ಸಮೀಪ ನಡೆದ ಘಟನೆ ಸಂಭವಿಸಿದೆ. ಕೇರಳದಿಂದ ಬೆಂಗಳೂರು ಕಡೆಗೆ ಹೋಗ್ತಿದ್ದ ಕಾರು ಅಪಘಾತಕ್ಕೆ ಗುರಿಯಾಗಿದ್ದು, ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡಿದೆದೆ.
ಗಾಯಾಳುಗಳು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದೇ ವೇಳೆ ತುಮಕೂರಿನಲ್ಲಿ ಲಾರಿ ಪಲ್ಚಿ ಹೊಡೆದ ಕಾರಣ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಬಳಿ ಘಟನೆ ಸಂಭವಿಸಿದೆ.
ವಾಟರ್ ಬಾಟಲ್ ತುಂಬಿಕೊಂಡು ಮೈಸೂರು ಕಡೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ಗಾಯಗೊಂಡಿದ್ದ ಚಾಲಕನಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

More News

You cannot copy content of this page