ANJALI AMBIGERA MURDER: ಆರೋಪಿ ಪತ್ತೆಗಾಗಿ ಎರಡು ವಿಶೇಷ ತಂಡ ರಚನೆ- ಪೊಲೀಸ್ ಕಮೀಷನರ್ ರೇಣುಕಾ

ಹುಬ್ಬಳ್ಳಿ: ಅಂಜಲಿ ಅಂಬೀಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ತೆಗೆ ಎರಡು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು
ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ​ ರೇಣುಕಾ ಹೇಳಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು,
ಅಂಜಲಿ ಅಂಬಿಗೇರಗೆ 4 ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ಅಂಜಲಿ ಕೊಲೆ ಮಾಡಿದ ವಿಶ್ವ ಅಲಿಯಾಸ್ ಗಿರೀಶ್ ಪರಿಚಯಸ್ಥ ಇಂದು ಮುಂಜಾನೆ ಅಂಜಲಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಅವರ ಮನೆಯವರ ದೂರಿನ ಪ್ರಕಾರ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅಂಜಲಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಆರೋಪಿ ಪತ್ತೆಗಾಗಿ ಎರಡು ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ವಿರುದ್ಧ ಪ್ರಕರಣಗಳಿವೆ. ವಿಶ್ವನ ವಿರುದ್ಧ ಕಳ್ಳತನ ಸೇರಿದಂತೆ ಹಲವು ಕೇಸ್ ದಾಖಲಾಗಿವೆ. ಎಲ್ಲಾ ಆಯಾಮದಲ್ಲಿ‌ ತನಿಖೆ ಮಾಡ್ತೇವೆ. ಅಂಜಲಿ ಕುಟುಂಬ ಬೆಂಡಿಗೇರಿ‌ ಠಾಣೆಗೆ ಬಂದಿರುವುದು ನಿಜ. ಈ ಕುರಿತು ಪೊಲೀಸ್​ ಠಾಣೆಯ ಸಿಸಿಕ್ಯಾಮರಾ ದೃಶ್ಯಗಳಿವೆ. ಆದರೆ ಯಾವ ಕಾರಣಕ್ಕೆ ಬಂದಿದ್ದಾರೆ ಅನ್ನೋದು ಸ್ಪಷ್ಟತೆ ಇಲ್ಲ. ಆದ್ರೆ ಸಿಬ್ಬಂದಿ ಬೇರೆ ಪ್ರಕರಣಕ್ಕೆ ಬಂದಿದ್ದರು ಅಂತಾ ಹೇಳ್ತಿದ್ದಾರೆ. ಈ ಬಗ್ಗೆಯೂ ತನಿಖೆ ಆರಂಭಿಸಿದ್ದೇವೆ. ಬೆಂಡಿಗೇರಿ ಠಾಣೆ ಸಿಬ್ಬಂದಿ ಲೋಪದೋಷವಿದ್ರೆ ಕ್ರಮ ಕೈಗೊಳ್ತೇವೆ ಎಂದು ಹೇಳಿದ್ದಾರೆ.
ವಿವಿಧ ಕಡೆ ಪೊಲೀಸ್ ಇಲಾಖೆಯಿಂದ ಶಾಲಾ-ಕಾಲೇಜು, ಮಹಿಳೆಯರು ಸೇರುವ ಸ್ಥಳಗಳಲ್ಲಿ, ಕಾರ್ಯ ಸ್ಥಳಗಳಲ್ಲಿ ಪೊಲೀಸರಿಂದ ಜಾಗೃತಿ ಮೂಡಿಸಲಾಗ್ತಿದೆ. ಹಲವಾರು ಮುಖ್ಯಸ್ಥರ ಜೊತೆಗೆ ಸಭೆ ನಡೆಸಲಾಗುತ್ತದೆ. ಮಕ್ಕಳ ಪಾಲಕರ ಜೊತೆಗೂ ಚರ್ಚಿಸಿ ಅರಿವು ಮೂಡಿಸಲಾಗುತ್ತಿದೆ. ನಗರದಲ್ಲಿ ಮಹಿಳೆಯರ‌ ಸುರಕ್ಷತೆಗೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಅಂಜಲಿ ಕುಟುಂಬಕ್ಕೆ ನ್ಯಾಯ ಕೊಡಿಸಿ ಎಂದು ಸ್ಥಳೀಯರಿಂದ ಮನವಿ ಬಂದಿವೆ . ಅಂಜಲಿ ಹತ್ಯೆ ಮಾಡಿದವನನ್ನು ಎನ್​ಕೌಂಟರ್ ಮಾಡಬೇಕು. ಅಂಜಲಿ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು. ಅಂಜಲಿ ಸಹೋದರಿಗೆ ಸರ್ಕಾರಿ ಕೆಲಸ ನೀಡಬೇಕೆಂದು ಮನವಿಗಳು ಸಹ ಸಾರ್ವಜನಿಕರಿಂದ ಬಂದಿವೆ ಎಂದು ತಿಳಿಸಿದರು

More News

You cannot copy content of this page