HUBLI MURDER: ಪ್ರೀತಿ ನಿರಾಕರಿಸಿದ್ದಕ್ಕೆ ಹುಡುಗಿ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಕೊಲೆಗೈದ ಪ್ರೇಮಿ

ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರ ಓಣಿಯ ದೇವಿಗುಡಿ ನಿವಾಸಿ ಅಂಜಲಿ (20) ಎಂಬಾಕೆಯೇ ಸಾವನ್ನಪ್ಪಿದ ಯುವತಿಯಾಗಿದ್ದು, ಈಕೆಗೆ ಅದೇ ಏರಿಯಾದ ವಿಶ್ವ ಅಲಿಯಾಸ್ ಗಿರೀಶ್ ಸಾವಂತ (21) ಎಂಬಾತ ಚಾಕುವಿನಿಂದ ಚುಚ್ಚಿ ಕೊಲೆಮಾಡಿದ್ದಾನೆಂದು ತಿಳಿದುಬಂದಿದೆ.

ವಿಶ್ವ ಕಳೆದ ಹಲವು ದಿನಗಳಿಂದ ಅಂಜಲಿಗೆ ಪ್ರೀತಿಸು ಎಂದು ಪೀಡಿಸುತ್ತಿದ್ದನಂತೆ. ಆದ್ರೆ ಅಂಜಲಿ ಪ್ರೀತಿ ನಿರಾಕರಿಸಿದ್ದಕ್ಕೆ ಇಂದು ಬೆಳ್ಳಂಬೆಳಗ್ಗೆ ಅಂಜಲಿ ನಿವಾಸಕ್ಕೆ ತೆರಳಿ, ಮನೆಯ ಕದ ಬಡದಿದ್ದಾನೆ. ಬಾಗಿಲು ತೆಗೆದ ಅಂಜಲಿಗೆ ಹೊಟ್ಟೆಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸದ್ಯ ವಿಷಯ ತಿಳಿದು ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

More News

You cannot copy content of this page