Search

Newly Married Couple Hanged: ನವ ವಿವಾಹಿತ ಜೋಡಿ ನೇಣಿಗೆ ಶರಣು, ಸಂಬಂಧಿಕರಿಗೆ ಭಾರೀ ಆಘಾತ

ವಿಜಯಪುರ: ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ಅತ್ಯಂತ ದಾರುಣ ಘಟನೆ ಸಂಭವಿಸಿದೆ. ಕೆಲವೇ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದ ಜೋಡಿ ಆತ್ಮಹತ್ಯೆಗೆ ಶರಣಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮನೋಜಕುಮಾರ ಪೋಳ (30) ರಾಖಿ (23) ಎಂದು ಗುರುತಿಸಲಾಗಿದೆ. ವಿಜಯಪುರ ‌ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯ ಮನೆಯಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಪರಸ್ಪರ ಪ್ರೀತಿಸಿ ಇಬ್ಬರು ಮದುವೆಯಾಗಿದ್ದರು.
ತಡರಾತ್ರಿ ಊಟ ಮಾಡಿದ ಬಳಿಕ ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೋಜಕುಮಾರ ಮತ್ತು ರಾಖಿ ಇಬ್ಬರೇ ಮನೆಯಲ್ಲಿದ್ದ ವೇಳೆ ಘಟನೆ ನಡೆದಿದೆ. ಮನೋಜಕುಮಾರ ತಾಯಿ ಭಾರತಿ ಮಗಳ ಊರಿಗೆ ಹೋಗಿದ್ದ ವೇಳೆ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಂದು‌ ಬೆಳಿಗ್ಗೆ ವಾಪಸ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ .ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ .ಸ್ಥಳಕ್ಕೆ ಜಲನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಕೇವಲ ನಾಲ್ಕು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದ ಜೋಡಿ ಅನಿರೀಕ್ಷಿತವಾಗಿ ಬದುಕಿಗೆ ವಿದಾಯ ಹೇಳಿದ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿದ್ದ ಕುಟುಂಬ ಸದಸ್ಯರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಪೊಲೀಸರ ತನಿಖೆ ಬಳಿಕ ಕಾರಣ ತಿಳಿದು ಬರಲಿದೆ.

ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಇನ್ನೊಂದೆಡೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಐದನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ವಿದ್ಯಾರ್ಥಿಯನ್ನು ಕರಸಾಲ ರಾಹುಲ್(21) ಎಂದು ಗುರುತಿಸಲಾಗಿದೆ. ರಾಹುಲ್ ಮೂಲತ: ಆಂಧ್ರಪ್ರದೇಶದ ಕರ್ನೂಲ್ ನಿವಾಸಿಯಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಬಳ್ಳಾರಿಯಲ್ಲಿ ನೆಲೆಸಿದ್ದರು.
ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ರಾಹುಲ್ ಓದಿನಲ್ಲಿ ಕೂಡ ಮುಂದಿದ್ದ ಎಂದು ವರದಿಯಾಗಿದ್ದ. ಐದನೆ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ ರಾಹುಲ್, ಕಾಲೇಜಿನಲ್ಲಿ ಪರೀಕ್ಷೆಗೆ ನಿನ್ನೆ ತಡವಾಗಿ ಬಂದಿದ್ದ ಎಂದು ಹೇಳಲಾಗುತ್ತಿದೆ. ಈ ವಿಚಾರವಾಗಿ ರಾಹುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಕಾಲೇಜಿನ ಐದನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ರಾಹುಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆಲವು ತಿಂಗಳ ಹಿಂದೆ ಕೂಡ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದಿಂದ ಬಿದ್ದು ಇದೇ ರೀತಿ ಆತ್ಮಹತ್ಯೆಗೆ ಶರಣಾಗಿದ್ದ. ನಕಲು ಮಾಡಿದ್ದಾಗ ಸಿಕ್ಕಿ ಬಿದ್ದ ಎಂಬ ಕಾರಣಕ್ಕೆ ಮನನೊಂದು ವಿದ್ಯಾರ್ಥಿ ಅಂದು ಆತ್ಮಹತ್ಯೆಗೆ ಮಾಡಿಕೊಂಡಿದ್ದ ಎಂದು ವರದಿಯಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ಬಾರಿ ಸದ್ದು ಮಾಡಿತ್ತು.

More News

You cannot copy content of this page