ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹೌದು.. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನೇಹಾ ಹಿರೇಮಠ ಕೊಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಯುವತಿಯ ಕೊಲೆ ಮಾಡಿರುವುದು ನಿಜಕ್ಕೂ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಹೆಣ್ಣುಮಕ್ಕಳಿಗೆ ಭದ್ರತೆಯೇ ಇಲ್ಲವಾಗಿದೆ. ಈ ಕೂಡಲೇ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು. ಅಲ್ಲದೇ ಕೊಲೆಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವ ಕಾರ್ಯವನ್ನು ಮಾಡಬೇಕು ಎಂದು ಒತ್ತಾಯಿಸಿದರು.
ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನೆ ನಿರತ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.