ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.
ಮೃತ ಅಂಜಲಿ ಮನೆಗೆ ಭೇಟಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ನೇಹಾ ಹತ್ಯೆ ನಂತರ ಮತ್ತೊಂದು ಅಮಾನುಷ ಘಟನೆ ನಡೆದಿದೆ.
ಒಬ್ಬ ಯುವಕ ಮನೆಗೆ ನುಗ್ಗಿ ನಿರ್ದಾಕ್ಷೀಣ್ಯವಾಗಿ ನಿರ್ಭಯವಾಗಿ ಕೊಲೆ ಮಾಡಿದ್ದಾನೆ.ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿದಂತಾಗಿದೆಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದರು.
ಈ ಪರಿಸ್ಥಿತಿಯಲ್ಲಿ ಇಡೀ ಸಮಾಜ ಇಂತಹ ನೊಂದವರ ಪರವಾಗಿ ಬೆಂಬಲಕ್ಕೆ ನಿಲ್ಲಬೇಕು. ನೇಹಾ ಹತ್ಯೆ ಆದ ನಂತರ ಇಂತಹ ಮತ್ತೊಂದು ಸಂದರ್ಭ ಪದೆ ಪದೆ ಬರಬಾರದಿತ್ತು. ಈ ಮನೆಯಲ್ಲಿ ಯಾರಾದ್ರೂ ಓದುವವರು ಇದ್ದರೆ ನಮ್ಮ ಮಠದಿಂದ ಉಚಿತ ಶಿಕ್ಷಣ ನೀಡುವುದಾಗಿ ಶ್ರೀಗಳು ಭರವಸೆ ನೀಡಿದರು.