Search

HD DEVEGOWDA BIRTHDAY: ಹುಟ್ಟುಹಬ್ಬ ಆಚರಣೆ “ಕಾರಣಾಂತರಗಳಿಂದ” ಬೇಡ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ

ಬೆಂಗಳೂರು : ಮೇ 18ರಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು 92ನೇ ವಸಂತ ಪ್ರಾರಂಭ ಮಾಡುತ್ತಿದ್ದು ಸಂಭ್ರಮ ಆದರೆ ಈ ವರ್ಷ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ನಿರ್ಧಾರ ಮಾಡಿದ್ದಾರೆ.

ಇಂದು ಇದೇ ವಿಷಯಕ್ಕೆ ಮಾಧ್ಯಮ ಪ್ರಕಟಣೆ ಹೋರಾಡಿಸಿರುವ ಮಾಜಿ ಪ್ರಧಾನಿ ಎಚ್ ಡಿ ಡಿ,ಇದೇ ತಿಂಗಳ 18 ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ.ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕೋರುತ್ತೇನೆ.ನಿಮ್ಮೆಲ್ಲರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ, ಎಂದು ತಿಳಿಸಿದ್ದಾರೆ.

ಶಾಸಕ ಎಚ್ ಡಿ ರೇವಣ್ಣ, ಹಾಗೂ ಮೊಮ್ಮಗ ಪ್ರಜ್ವಲ್ ರೇವಣ್ಣ ಮೇಲೆ ಬಂದಿರುವ ಆರೋಪಗಳಿಂದ ವಿಚಲಿತ ಆಗಿರುವ ಮುದ್ಸದ್ದಿ ರಾಜಕಾರಣಿ ಈ ಸಂವತ್ಸರ ಜನ್ಮದಿನದ ಆಚರಣೆ ಮಾಡಿಕೊಳ್ಳುತ್ತಿಲ್ಲ.

More News

You cannot copy content of this page