Search

JAGADISH SHETTAR: ಹುಬ್ಬಳ್ಳಿಯಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ- ಸರ್ಕಾರದ ವಿರುದ್ಧ ಜಗದೀಶ್ ಶೆಟ್ಟರ್ ಗಂಭೀರ ಆರೋಪ

ಹುಬ್ಬಳ್ಳಿ: ರಾಜ್ಯದ ವಾಣಿಜ್ಯ ರಾಜಧಾನಿಎಂದೇ ಖ್ಯಾತಿಪಡೆದಿರುವ ಹುಬ್ಬಳ್ಳಿಯಲ್ಲಿ ಹೆಣ್ಣು ಮಕ್ಕಳ ಸರಣಿ ಹತ್ಯೆಗೆ ಬಿಜೆಪಿ ತೀವ್ರವಾಗಿ ಪ್ರತಿಕ್ರಿಯಿಸಿದೆ. ಇದೀಗ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಶೆಟ್ಟರ್ ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಡಳಿತದ ಬಿಗಿ ಇಲ್ಲ.ಕಾನೂನು ಸುವ್ಯವಸ್ಥೆ ಕಾಪಾಡುತಿಲ್ಲ ಎಂದ ಶೆಟ್ಟರ್ ಆರೋಪಿಸಿದ್ದಾರೆ.

ನೇಹಾ ಹಿರೇಮಠ ಕೊಲೆಯಾದ ನಂತರ ಪೊಲೀಸರು ಎಚ್ಚೆತ್ತುಕೊಳ್ಳಬೇಕಿತ್ತು. ಆದರೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ. ಪೊಲೀಸರು ಎಲ್ಲ ಪ್ರಕರಣಗಳನ್ನು ಸುಲಭವಾಗಿ ಪರಿಗಣಿಸುತ್ತಿದ್ದಾರೆ. ಇದರಿಂದಾಗಿ ಇಂತಹ ಘಟನೆಗಳು ಮರುಕಳಿಸುತ್ತಿದೆ ಎಂದು ಶೆಟ್ಟರ್ ಆರೋಪಿಸಿದ್ದಾರೆ.
ಸಿಎಂ, ಡಿಸಿಎಂ ಜವಾಬ್ದಾರಿ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಮತ್ತು ಗೃಹ ಸಚಿವ ಪರಮೇಶ್ವರ್ ಹೊಣೆಯಾಗಿದ್ದಾರೆ. ಅವರ ವೈಫಲ್ಯದಿಂದಾಗಿ ಈ ರೀತಿಯ ಘಟನೆಗಳಾಗುತ್ತಿದೆ ಎಂದು ಶೆಟ್ಟರ್ ಆರೋಪಿಸಿದ್ದಾರೆ. ಅಂಜಲಿ ಹತ್ಯೆಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಶೆಟ್ಟರ್ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಪೊಲೀಸರು ಬಿಗಿ ಕ್ರಮ ಕೈಗೊಳ್ತಿಲ್ಲ. ಮೇಲಿನ ಅಧಿಕಾರಿಗಳ ಮಾತು ಕೇಳುತ್ತಿಲ್ಲ. ಪೊಲೀಸ್ ವ್ಯವಸ್ಥೆಯಲ್ಲಿ ಲೋಪದೋಷ ಇದೆ. ಹೀಗೆ ಮುಂದುವರಿದ್ರೆ ಇನ್ನು ದೊಡ್ಡ ಪ್ರಮಾಣದ ಕಾನೂನು ಸುವ್ಯವಸ್ಥೆ ಹಾಳಾಗಬಹುದು ಎಂದು ಶೆಟ್ಟರ್ ಆತಂಕ ವ್ಯಕ್ತಪಡಿಸಿದ್ದಾರೆ. ಎಲ್ಲೋ ಒಂದು ಕಡೆ ಅಧಿಕಾರಿಗಳ ಹಾಗೂ ಸರ್ಕಾರದ ನಡುವೆ ಸಮನ್ವಯತೆ ಇಲ್ಲ. ಅಂಜಲಿ ಕುಟುಂಬಸ್ಥರು ರಕ್ಷಣೆ ಕೊಡಿ ಎಂದು ಪೊಲೀಸರಿಗೆ ಹೇಳಿದ್ರು. ಮುಂಜಾಗೃತ ಕ್ರಮವಾಗಿ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು. ಇದಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದೆ
ಸರ್ಕಾರ ಪತನ ಮಾತು-ಶೆಟ್ಟರ್ ಪ್ರತಿಕ್ರಿಯೆ
ಚುನಾವಣಾ ಫಲಿತಾಂಶದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಮಾತಿನ ಕುರಿತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿ ಇದೆ. ಇದು ಸರಕಾರದ ಪತನಕ್ಕೂ ಕಾರಣವಾಗಬಹುದು. ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಇತ್ತೀಚೆಗೆ ಹೇಳಿದ್ದಾರೆ. ನಾನು ಮೂರು ತಿಂಗಳ ಹಿಂದೆಯೇ ಈ ಕುರಿತು ಮಾತನಾಡಿದ್ದೇನೆ.
ಬಿಜೆಪಿ ಆಪರೇಶನ್ ಕಮಲ ಮಾಡೋ ಅವಶ್ಯಕತೆ ಇಲ್ಲ. ಕಾಂಗ್ರೆಸ್ ನವರ ಕಚ್ಚಾಟದಿಂದಲೇ ಸರ್ಕಾರ ಬಿದ್ದು ಹೋಗಬಹುದು
ಸಿಎಮ್, ಡಿಸಿಎಮ್ ನಡುವೆ ಸಮನ್ವಯ ಕೊರತೆ ಇದೆ ಎಂದು ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ವಿಧಾನಪರಿಷತ್ ಚುನಾವಣೆ ಸಂಬಂಧ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ರಘುಪತಿ ಭಟ್ ಅವರಿಗೆ ಟಿಕೆಟ್ ಕೊಡಬೇಕಿತ್ತು. ಈ ಸಂಬಂಧ ನಾನು ಅವರಲ್ಲಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಪೆನ್ ಡ್ರೈವ್ ಪಾಲಿಟಿಕ್ಸ್ ಬಗ್ಗೆ ಮಾತನಾಡಿದ ಶೆಟ್ಟರ್, ಪ್ರಜ್ವಲ್ ರೇವಣ್ಣಗೂ ಬಿಜೆಪಿಗೂ ಏನು ಸಂಬಂಧ ಇಲ್ಲ. ಇದು ಮೈತ್ರಿಕೂಟದ ಮೇಲೆ ಪರಿಣಾಮ ಬೀರಲ್ಲ ಎಂದು ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸುವ ವಿಶ್ವಾಸವನ್ನು ಕೂಡ ಶೆಟ್ಟರ್ ವ್ಯಕ್ತಪಡಿಸಿದ್ದಾರೆ.

More News

You cannot copy content of this page