Self Harming: ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್ ಟ್ರೈನರ್ ಸೂಸೈಡ್

ಬೆೆಂಗಳೂರು: ಮನೆ ಬಿಟ್ಟು ಹೋಗಿದ್ದ ಪತ್ನಿಯನ್ನು ಮತ್ತೆ ಕರೆತರುವ ನಿಟ್ಟಿನಲ್ಲಿ ಪತಿ ಮಾಡಿದ ವಿಡಿಯೋ ಕಾಲ್ ಆತನ ಪ್ರಾಣಕ್ಕೆ ಮುಳುವಾದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ಸಂಭವಿಸಿದೆ.
ಪತ್ನಿಯನ್ನು ಹೆದರಿಸಲು ಹೋಗಿ ಅಮಿತ್ ಎಂಬಾತ ಪ್ರಾಣ ಕಳೆದುಕೊಂಡಿದ್ದಾನೆ. ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದ ಅಮಿತ್ ಪತ್ನಿ ದಾಂಪತ್ಯ ಕಲಹದಿಂದ ಬೇಸೆತ್ತು ಮನೆ ಬಿಟ್ಟು ಹೋಗಿದ್ದಳು. ಪತ್ನಿಯನ್ನು ಮತ್ತೆ ಮನೆಗೆ ಕರೆ ತರಲು ಅಮಿತ್ ಆತ್ಮಹತ್ಯೆಯ ನಾಟಕವಾಡಿದ್ದ ಎಂದು ಹೇಳಲಾಗಿದೆ. ವಿಡಿಯೋ ಕಾಲ್ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ನಿಗೆ ಬೆದರಿಸಿದ್ದ. ಈ ವೇಳೆ ಫೋನ್ ಜಾರಿ, ಕುತ್ತಿಗೆಗೆ ಬಿಗಿದ ಹಗ್ಗ ಅಮಿತ್ ಪ್ರಾಣವನ್ನು ಅಪಹರಿಸಿದೆ.
ಬಿಹಾರ ಮೂಲದ ಅಮಿತ್

ಅಮಿತ್‌ ಕುಮಾರ್‌ನಿಂದ ಪತ್ನಿ ಕೆಲವು ತಿಂಗಳಿನಿಂದ ದೂರವಾಗಿದ್ದಳು. ಬಿಹಾರ ಮೂಲದ ಅಮಿತ್ ಕುಮಾರ್(28). ಹಾಸನ ಮೂಲದ ಯುವತಿಯನ್ನು ಮದುವೆಯಾಗಿದ್ದರು. ಬೆಂಗಳೂರಿನ ದಾಸರಹಳ್ಳಿಯಲ್ಲಿ ವಾಸವಾಗಿದ್ದರು.
ಜಿಮ್ ಟ್ರೈನರ್ ಅಮಿತ್ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಎಂದು ವರದಿಯಾಗಿದೆ.

ಪೋಷಕರ ವಿರೋಧದ ನಡುವೆ ಅಮಿತ್ ಪ್ರೀತಿಸಿದ ಹುಡುಗಿಯನ್ನು ಮದುವೆಯಾಗಿದ್ದ. ಮದುವೆ ಬಳಿಕ ಅಮಿತ್ ಕುಮಾರ್ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ್ದಳು ನರ್ಸಿಂಗ್ ಕೋರ್ಸ್‌ ೆಸೇರಿದ ಬಳಿಕ ಫ್ರೆಂಡ್ಸ್ ಅಂತೇಳಿ ಪದೇ ಪದೇ ಪೋನ್ ಕಾಲ್ ಮಾಡುತ್ತಿದ್ದಳು ಎಂದು ಹೇಳಲಾಗಿದೆ. ಈ ಸಂಬಂಧ ಪತಿ ಮತ್ತು ಪತ್ನಿ ಮಧ್ಯೆ ಪದೇ ಪದೇ ಜಗಳವಾಗುತ್ತಿತ್ತು ಎಂದು ಹೇಳಲಾಗಿದೆ. ಜಗಳ ವಿಕೋಪಕ್ಕೆ ಹೋದ ಪರಿಣಾಮ ಅಮಿತ್ ಪತ್ನಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು.

ನಿರಂತರ ವಿಡಿಯೋ ಕಾಲ್
ಪತ್ನಿ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದ ಬಳಿಕ ಅಮಿತ್ ಪ್ರತಿದಿನ ಪೋನ್ ಮಾಡಿ ಮನೆಗೆ ಬರುವಂತೆ ಒತ್ತಡ ಹೇರುತ್ತಿದ್ದ ಎಂದು ಹೇಳಲಾಗುತ್ತಿದೆ. ಮನೆಗೆ ಬರದಿದ್ದರೆ ಆತ್ಮಹತ್ಯೆಮಾಡಿಕೊಳ್ಳುವುದಾಗಿ ವಿಡಿಯೋ ಕಾಲ್ ಮೂಲಕ ಬೆದರಿಕೆ ಹಾಕಿದ್ದ ಎಂದು ಕೂಡ ಹೇಳಲಾಗುತ್ತಿದೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್‌ನಲ್ಲಿ ಹೆದರಿಸಲು ಅಮಿತ್ ಮುಂದಾಗಿದ್ದ. ಈ ವೇಳೆ ಮೊಬೈಲ್ ಕೈ ಜಾರಿ ಬಿದ್ದಾಗ ಕುತ್ತಿಗೆಗೆ ಕುಣಿಕೆ ಬಿಗಿದ ಕಾರಣ ಪ್ರಾಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ.
ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಯುವತಿ ಅನುಮಾನಾಸ್ಪದ ಸಾವು
ಹುಬ್ಬಳ್ಳಿಯಲ್ಲಿ ಅಂಜಲಿ ಬರ್ಬರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ದ್ವಿತೀಯ ಪದವಿ ವಿದ್ಯಾರ್ಥಿನಿ ಪ್ರಭುದ್ಯಾ ಮೃತಪಟ್ಟಿದ್ದಾಳೆ. ಮನೆಯ ಸ್ನಾನದ ಕೋಣೆಯಲ್ಲಿ ಪ್ರಭುದ್ಯಾ ಮೃತದೇಹ ಪತ್ತೆಯಾಗಿದೆ. ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಹಲವು ಅನುಮಾನ ಮೂಡಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ. ಪ್ರಭುದ್ಯಾ ಸಾವಿನ ಕುರಿತಂತೆ ಹಲವು ಅನುಮಾನ ಕೂಡ ಮೂಡಿದೆ. ಪೊಲೀಸರು ಯುಡಿಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

More News

You cannot copy content of this page