ಲಖನೌ: ಪ್ರಧಾನಿ ನರೇಂದ್ರ ಮೋದಿ 2024ರ ಚುನಾವಣೆಯ ಫಲಿತಾಂಶ ಬಂದ ಬಳಿಕ ಅದೇ ಸ್ಥಾನದಲ್ಲಿ ಮುಂದುವರಿಯುವ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತೆರೆ ಎಳೆದಿದ್ದಾರೆ.
ಯಾವುದೇ ಕಾರಣಕ್ಕೂ ಮೋದಿ ಹೊರತುಪಡಿಸಿ ಪ್ರಧಾನಿ ಹುದ್ದೆಗೆ ಇತರರ ನೇಮಕವಾಗುವ ಸಾಧ್ಯತೆ ಇಲ್ಲ. 2024 ಮಾತ್ರವಲ್ಲ 2029ರಲ್ಲಿ ಕೂಡ ಮೋದಿಯೇ ಪ್ರಧಾನಿ ಎಂದು ರಾಜ್‌ನಾಥ್ ಸಿಂಗ್ ಘೋಷಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಈ ಕುರಿತಂತೆ ಸ್ಷಷ್ಟನೆ ನೀಡಿದ ಬಳಿಕ ರಾಜ್ ನಾಥ್ ಸಿಂಗ್ ಕೂಡ ಹೇಳಿಕೆ ನೀಡಿರುವುದು ಅತ್ಯಂತ ಮಹತ್ವ ಪಡೆದುಕೊಂಡಿದೆ.
ಬಾಂಬ್ ಸಿಡಿಸಿದ್ದ ಅರವಿಂದ ಕೇಜ್ರಿವಾಲ್
ತಿಹಾರ್ ಜೈಲಿನಿಂದ ಹೊರ ಬರುತ್ತಿದ್ದಂತೆಯೇ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರ ವಯಸ್ಸಿನ ಕುರಿತು ಪ್ರಸ್ತಾಪಿಸಿದ್ದರು. 75 ವರ್ಷ ತುಂಬಿದ್ದವರು ರಾಜಕೀಯ ನಿವೃತ್ತಿ ಪಡೆಯಬೇಕು ಎಂಬ ಅಲಿಖಿತ ನಿಯಮ ಬಿಜೆಪಿಯಲ್ಲಿದೆ. ಇದರ ಭಾಗವಾಗಿಯೇ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ ಸಹಿತ ಬಿಜೆಪಿ ಹಿರಿಯ ನಾಯಕರು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದಾರೆ. ಪ್ರಧಾನಿ ಮೋದಿಗೂ ಇದೇ ನಿಯಮ ಅನ್ವಯವಾಗುದಿಲ್ಲವೇ.. ಹಾಗಿದ್ದರೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ಯಾರು. ಅಮಿತ್ ಷಾ ಅವರನ್ನು ಬಿಟ್ಟು ಇತರ ನಾಯಕರು ಪ್ರಧಾನಿಯಾಗಲು ಸಾಧ್ಯವೇ.
ನೀವು ನೀಡುವ ಪ್ರತಿಯೊಂದು ವೋಟ್ ಮೋದಿಗಲ್ಲ.. ಬದಲಾಗಿ ಅದು ಅಮಿತ್ ಷಾ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಅವಕಾಶ ಕಲ್ಪಿಸಲಿದೆ ಎಂದು ಅರವಿಂದ ಕೇಜ್ರಿವಾಲ್ ರಾಜಕೀಯ ಬಾಂಬ್ ಸಿಡಿಸಿದ್ದರು.
ಬಿಜೆಪಿ ಮರು ತಂತ್ರ
ಹಿಂದಿ ಭಾಷಿಕ ರಾಜ್ಯಗಳಲ್ಲಿ ಲೋಕಸಭೆ ಚುನಾವಣೆ ನಿರ್ಣಾಯಕ ಹಂತ ತಲುಪಿರುವಂತೆಯೇ ಅರವಿಂದ ಕೇಜ್ರಿವಾಲ್ ಸಿಡಿಸಿದ್ದ ರಾಜಕೀಯ ಬಾಂಬ್ ಬಿಜೆಪಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿತ್ತು. ತಕ್ಷಣ ಎಚ್ಚೆತ್ತುಕೊಂಡ ಬಿಜೆಪಿ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿತ್ತು.
ಅರವಿಂದ ಕೇಜ್ರಿವಾಲ್ ಹೇಳಿಕೆ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಮೊದಲ ಪ್ರತಿಕ್ರಿಯೆ ನೀಡಿದ್ದರು. ಪ್ರಧಾನಿ ಮೋದಿಯೇ ದೇಶವನ್ನು ಮುನ್ನಡೆಸಲಿದ್ದಾರೆ. ಇದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದ್ದರು. ಅಮಿತ್ ಷಾ ಸಾರ್ವಜನಿಕ ಸಭೆಯಲ್ಲಿ ಕೂಡ ಬಿಜೆಪಿ ನಿಲುವನ್ನು ಸ್ಪಷ್ಟಪಡಿಸಿದ್ದರು.
ಅಮಿತ್ ಷಾ ಹೇಳಿಕೆ ಬಳಿಕ ರಂಗಕ್ಕಿಳಿದ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಈ ಸಂಬಂಧ ಸುದೀರ್ಘ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದರು. ಬಿಜೆಪಿಯಲ್ಲಿ 75 ವರ್ಷಕ್ಕೆ ನಿವೃತ್ತಿ ಎಂಬ ಕಾನೂನು ಇಲ್ಲ ಎಂದು ಪುನರುಚ್ಚರಿಸಿದ್ದರು. ಈ ಮೂಲಕ ಪ್ರಧಾನಿ ಮೋದಿ ಅದೇ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಘೋಷಣೆ ಮಾಡಿದ್ದರು.
ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ದೊರೆತರೆ ಜೂನ್ 4ರ ಬಳಿಕವೂ ಮೋದಿ ಪ್ರಧಾನಿಯಾಗಿ ಮುಂದುವರಿಯುವ ಸಾಧ್ಯತೆ ನಿಚ್ಚಳವಾಗಿದೆ