ಹುಬ್ಬಳ್ಳಿ: ಮೊನ್ನೆಯಷ್ಟೇ ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬುವಂತ ಯುವತಿಯ ಧಾರುಣವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ ಅಂಬಿಗ ಸಮುದಾಯದಿಂದ ಹಾಗೂ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹೌದು..ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ನಿವಾಸದಿಂದ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಿದ್ದು, ಸಾವಿರಾರು ಜನರ ನೇತೃತ್ವದಲ್ಲಿ ಪ್ರತಿಭಟನೆ ಚಾಲನೆ ಸಿಕ್ಕಿದೆ.


ಇನ್ನೂ ಚೌಡಯ್ಯದಾನಪುರದ ಶಾಂತಭೀಷ್ಮ ಅಂಬಿಗರ ಚೌಡಯ್ಯನವರು, ಕಲ್ಯಾಣಪುರ ಬಸವಣ್ಣಜ್ಜ, ಮನಸೂರು ಮಠದ ಬಸವರಾಜ ದೇವರು ಸೇರಿದಂತೆ ವಿವಿಧ ಮಠಾಧೀಶರು ಭಾಗಿಯಾಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನ್ಯಾಯಕ್ಕಾಗಿ ಒತ್ತಾಯಿಸಿದರು.