ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ ಶಾಸಕರು ಪ್ರಯಾಣಿಸುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಕಾರು ಅಪಘಾತದಲ್ಲಿ ಬೈಲಹೊಂಗಲ ಶಾಸಕ ಮಹಾತೇಶ್ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವಿಧಾನಸೌಧ ಮುಂಭಾಗದಲ್ಲೇ ಅಪಘಾತ ಸಂಭವಿಸಿದೆ. ಶಾಸಕರ ಭವನದಿಂದ ಹೊರಟಿದ್ದ ವೇಳೆ ವೇಗವಾಗಿ ಬಂದ ಇನ್ನೊಂದು ಕಾರು ಶಾಸಕರ ಕಾರಿಗೆ ಡಿಕ್ಕಿ ಹೊಡೆದಿದೆ.
ವಿಧಾನಸೌಧದಿಂದ ಹೊರಕ್ಕೆ ಬರ್ತಿದ್ದಂತೆ ಶಾಸಕ ಮಹಾಂತೇಶ್ ಕೌಜಲಗಿ ಪ್ರಯಾಣಿಸುತ್ತಿದ್ದ ಇನೋವಾ ಕಾರ್‌ಗೆ ಪೋಲೋ ಕಾರ್ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಶಾಸಕ ಮಹಂತೇಶ್ ಕೌಜಲಗಿ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿಲಾಗಿದೆ.

ಬಿಜೆಪಿ ಶಾಸಕನ ವಿರುದ್ಧ ಎಫ್ಐಆರ್
ಇದೇ ವೇಳೆ ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿ ಮತ್ತು ಬೆದರಿಕೆ ಒಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಿಜೆಪಿ ಮುಖಂಡನೊಬ್ಬನ ಬಿಡುಗಡೆಗೆ ಆಗ್ರಹಿಸಿ ಬೆಂಬಲಿಗರ ಜೊತೆ ಠಾಣೆಯಲ್ಲಿ ಶಾಸಕರು ಧರಣಿ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಇದೇ ವೇಳೆ ಕರ್ತವ್ಯ ನಿರತ ಅಧಿಕಾರಿಗೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ
‘ಪೊಲೀಸ್ ಠಾಣೆ ನಿಮ್ಮ ಅಪ್ಪಂದಾ.’ ಎಂದು ಪೂಂಜಾ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.ಬೆಳ್ತಂಗಡಿ PSI ಮುರುಳಿಧರ್ ನಾಯ್ಕ್ ಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವ ಮುಖಂಡನನ್ನು ಬಂಧಿಸಲಾಗಿದೆ ಎಂದು ಶಾಸಕರು ಆರೋಪಿಸಿದ್ದರು. ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲಿನ ಕೋರೆಗೆ ತಹಶೀಲ್ದಾರ್ ನೇತೃತ್ವದ ಪೊಲೀಸ್ ತಂಡ ದಾಳಿ ಮಾಡಿ ಶಶಿರಾಜ್ ಶೆಟ್ಟಿ ಎಂಬವರನ್ನು ಬಂಧಿಸಿತ್ತು. ಶಶಿರಾಜ್ ಶೆಟ್ಟಿ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಪೊಲೀಸರ ಕ್ರಮ ಖಂಡಿಸಿ ಶಾಸಕರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ರಾತ್ರೋರಾತ್ರಿ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದರು. ಸರ್ಕಾರಿ ಅಧಿಕಾರಿಗಳು ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.