ಬೆಂಗಳೂರು : ವಿಧಾನಸಭೆ ಯಿಂದ ವಿಧಾನಪರಿಷತ್ ಗೆ ಆಯ್ಕೆಯಾಗುವ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.ಜೂನ್ 13ಕ್ಕೆ ಚುನಾವಣೆ ನಡೆಯಲಿದೆ.

ಜೂ.17ಕ್ಕೆ 11 ಎಂಎಲ್ ಸಿಗಳ ಅವಧಿ ಮುಕ್ತಾಯವಾಗಲಿದೆ. ಅರವಿಂದ್ ಕುಮಾರ್ ಅರಲಿ, ಎನ್.ಎಸ್.ಭೋಸರಾಜು, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜುಗೌಡ, ಕೆ.ಪಿ.ನಂಜುಂಡಿ, ಬಿ.ಎಂ.ಫಾರೂಕ್, ರಘುನಾತ್ ಮಲ್ಕಾಪುರೆ, ಎನ್.ರವಿಕುಮಾರ್, ಎಸ್.ರುದ್ರೇಗೌಡ ಹಾಗು ಕೆ.ಹರೀಶ್ ಕುಮಾರ್ ಜೂ.17ಕ್ಕೆ ಎಂಎಲ್ ಸಿಯಿಂದ ನಿವೃತ್ತಿಯಾಗಲಿದ್ದಾರೆ.
ತೆರವಾಗಿರುವ 11 ಸ್ಥಾನಗಳಿಗೆ ಜೂ.17 ಚುನಾವಣೆ ನಡೆಯಲಿದ್ದು, ಅದೇ ದಿನ ಸಂಜೆ ಮತ ಎಣಿಕೆ ನಡೆಯಲಿದೆ. ಚುನಾವಣೆ ಸಂಬಂಧ ಮೇ. 27ಕ್ಕೆ ಅಧಿಸೂಚನೆ ಹೊರಡಿಸಲಿದ್ದಾರೆ. ಜೂ.3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಜೂ.4 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂ.6 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.