ಹುಬ್ಬಳ್ಳಿ: ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಸಂಬಂಧ ಆರೋಪಿ ಗಿರೀಶ ಸಾವಂತನನ್ನು ಸಿಐಡಿ ಅಧಿಕಾರಿಗಳು ಬುಧವಾರ ತಮ್ಮ ಕಸ್ಟಡಿಗೆ ಪಡೆದರು.
ಗಾಯಗೊಂಡಿದ್ದ ಗಿರೀಶನಿಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಆತನನ್ನು ವಶಕ್ಕೆ ಪಡೆದರು. ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಸಿಐಡಿ ಎಸ್.ಪಿ. ವೆಂಕಟೇಶ್ ನೇತೃತ್ವದ ಡಿವೈಎಸ್‌ಪಿ ದರ್ಜೆ ಅಧಿಕಾರಿ ಸೇರಿ ಎಂಟು ಮಂದಿ ಅಧಿಕಾರಿಗಳ ತಂಡ ಮಂಗಳವಾರ ಹುಬ್ಬಳ್ಳಿಗೆ ಆಗಮಿಸಿತ್ತು. ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆದಿತ್ತು.