BENGALURU RAINS: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಿಟಿ ರೌಂಡ್ಸ್: ಬಿಟಿಎಂ ಮೆಟ್ರೋ ಸ್ಟೇಷನ್

ಸ್ಥಳ- 3: ಬಿಟಿಎಂ ಮೆಟ್ರೋ ಸ್ಟೇಷನ್

ವಾರ್ಡ್- ಬಿಟಿಎಂ ಲೇಔಟ್‌

ವಿಧಾನಸಭೆ ಕ್ಷೇತ್ರ: ಬಿಟಿಎಂ ಲೇಔಟ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಸಂಚಾರ, ಸ್ಥಳ ಪರಿಶೀಲನೆ ವೇಳೆಗೆ ಬಿಟಿಎಂ ಮೆಟ್ರೋಸ್ಟೇಷನ್‌ಗೆ ಭೇಟಿ ನೀಡಿ ಮೇಲುಸೇತುವೆ ರಸ್ತೆ ಹಾಗೂ ಮೆಟ್ರೋ ಮಾರ್ಗಗಳೆರಡೂ ಒಂದರ ಮೇಲೊಂದು ಇರುವ ಡಬಲ್‌ ಡೆಕ್ಕರ್‌ – 2 tier ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದರು. ಮೂರು ಕಿ.ಮೀ. ಉದ್ದದ ಈ ವ್ಯವಸ್ಥೆಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, ಸಂಚಾರ ದಟ್ಟಣೆ ನಿವಾರಣೆಗೆ ಈ ಡಬ್ಬಲ್ ಡೆಕರ್ ಮಾದರಿಯನ್ನು ನಗರದ ಇತರ ಭಾಗಗಳಲ್ಲಿಯೂ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ಸಂಚಾರ ದಟ್ಟಣೆಗೆ ಪರಿಹಾರ ರೂಪವಾಗಿ ಈ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ.
ಇದಲ್ಲದೆ, ಸುಗಮ ಸಂಚಾರಕ್ಕಾಗಿ, ಬಿಟಿಎಂ ನಿಂದ ಬನಶಂಕರಿ ಕಡೆಗೆ ಹೋಗುವಾಗ, ರಾಘವೇಂದ್ರಸ್ವಾಮಿ ಟೆಂಪಲ್‌ ಸರ್ಕಲ್‌, ಜಯನಗರ 5ನೇ ಬ್ಲಾಕ್‌ನಲ್ಲಿ ಅಂಡರ್‌ ಪಾಸ್‌ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇಲ್ಲಿ ಅಂಡರ್‌ ಪಾಸ್‌ ನಿರ್ಮಿಸಲು ಸೂಚಿಸಿದರು.

More News

You cannot copy content of this page