ನಾನಾ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾಗುವ ಪ್ರದೇಶಗಳಿಗೆ ಭೇಟಿ ಕಾರ್ಯಕ್ರಮ
ಸ್ಪಾಟ್ 2-
ಸ್ಥಳ: ನಾಯಂಡಹಳ್ಳಿ
ವಿಧಾನಸಭಾ ಕ್ಷೇತ್ರ: ವಿಜಯನಗರ
ಯಾವ ವಾರ್ಡ್: ನಾಯಂಡಹಳ್ಳಿ ವಾರ್ಡ್
ಸಮಸ್ಯೆ ಏನು: ರಾಜಕಾಲುವೆಯಲ್ಲಿ ಮಳೆಗಾಲ ಪ್ರವಾಹ ಉಂಟಾಗುತ್ತಿದೆ. ಫ್ಲೈಓವರ್ ನಿರ್ಮಿಸಿದ್ದರಿಂದ ರಾಜಕಾಲುವೆಯ ವಿಸ್ತಾರ ಕಡಿಮೆ ಆಗಿದೆ.
ಮುಖ್ಯಮಂತ್ರಿಗಳ ಸೂಚನೆ ಏನು: ನೀರು ಸರಾಗವಾಗಿ ಹರಿದುಹೋಗಲು ಹೆಚ್ಚುವರಿ ಕಾಲುವೆ ಅಗತ್ಯವಿದೆ. ಏಳುಕೋಟಿ ವೆಚ್ಚದ ಕಾಮಗಾರಿ ಅನುಮೋದನೆಯಾಗಿದ್ದು, ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ವಿವರಿಸಿದರು. ಅದರಂತೆ ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ನೀಡಿ, ಕೂಡಲೇ ಬಿಬಿಎಂಪಿಯು ಕಾಮಗಾರಿ ಕೈಗೆತ್ತಿಕೊಳ್ಳಲು ಅನುವು ಮಾಡುವಂತೆ ಎರಡೂ ಇಲಾಖೆಗಳಿಗೆ ಸೂಚನೆ ನೀಡಿದರು.
ಕಾಲಮಿತಿ: ಈ ವರ್ಷದೊಳಗೆ