ಸಿಟಿ ರೌಂಡ್ಸ್ ವೇಳೆ ಸಿಎಂ ಕಣ್ಣಿಗೆ ರಸ್ತೆ ಬದಿ ಇದ್ದ ಒಣ ಮರಗಳು ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಸಿಎಂ, ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಬನಶಂಕರಿ 2nd stage 100 ft. ರಸ್ತೆಯ ಒಣಗಿದ ಮರಗಳನ್ಮು ತೆರವುಗೊಳಿಸಬೇಕು. ನಗರದಾದ್ಯಂತ ಇರುವ ಒಣಮರ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು, ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬೇಕು, ಪದ್ಮನಾಭನಗರ ಫ್ಲೈಓವರ್ ಬಳಿ ಹಾನಿಯಾಗಿರುವ ಫುಟ್ ಪಾತ್ ಶೀರ್ಘವಾಗಿ ದುರಸ್ತಿಗೊಳಿಸಲು ಹಾಗೂ ಮೆಟ್ರೋ ಮತ್ತು ಫ್ಲೈ ಓವರ್ ಕಾಮಗಾರಿಯಿಂದಾಗಿ ಅಲ್ಲಲ್ಲಿ ಹಾಕಲಾಗಿದ್ದ ಡೆಬ್ರಿಸ್ ಗಳನ್ನು ಆಗಿಂದಾಗಲೇ ತೆರವುಗೊಳಿಸಲು ಸಿಎಂ ಸೂಚನೆ ನೀಡಿದರು.