ESHWAR KHANDRE: ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ

ಬೆಂಗಳೂರು: ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯರು, ಕಾಂಗ್ರೆಸ್ ನ ಹಿರಿಯ ಮುಖಂಡರೂ ಆಗಿದ್ದ ಶ್ರೀ ಇಕ್ಬಾಲ್ ಅಹ್ಮದ್ ಸರಡಗಿ (80) ಅವರು ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ನಾಯಕರಾಗಿ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದ ಶ್ರೀ ಸರಡಗಿ ಅವರು, ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು, ಅವರ ಸಾವಿನ ಸುದ್ದಿ ತಿಳಿದು ದುಃಖವಾಗಿದೆ ಎಂದು ತಿಳಿಸಿದ್ದಾರೆ.
ಕಾನೂನು ಪದವೀಧರರಾಗಿದ್ದ ಶ್ರೀಯುತರು 1999 ಮತ್ತು 2004ರಲ್ಲಿ ಸಂಸತ್ ಸದಸ್ಯರಾಗಿ, ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ನಾಡಿಗೆ ನೀಡಿರುವ ಕೊಡುಗೆ ಸ್ಮರಣಾರ್ಹವಾದದ್ದು.
ಈ ನೋವಿನ ಸಂದರ್ಭದಲ್ಲಿ ಶ್ರೀ ಇಕ್ಬಾಲ್ ಅಹ್ಮದ್ ಸರಡಗಿ ಅವರ ಕುಟುಂಬದವರಿಗೆ, ಬಂಧು-ಮಿತ್ರರು ಮತ್ತು ಅಪಾರ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ, ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

More News

You cannot copy content of this page