ಮಂಗಳೂರು: ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆಯೊಡ್ಡಿದ್ದ ಆರೋಪ ಎದುರಿಸುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಇದೀಗ ಬಂಧನ ಭೀತಿ ಎದುರಾಗಿದೆ. ಪೂಂಜಾ ಮನೆಗೆ ಇದೀಗ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಬಿಜೆಪಿ ನಾಯಕನ ಬಂಧನ ಪ್ರತಿಭಟಿಸಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಠಾಣೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಪೊಲೀಸ್ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿ ಮತ್ತು ಬೆದರಿಕೆ ಒಡ್ಡಿದ್ದರು ಎಂದು ಆರೋಪಿಸಲಾಗಿದೆ.
ಬೆಳ್ತಂಗಡಿ ಠಾಣೆೆಗೆ ನುಗ್ಗಿದ್ದ ಆರೋಪ
ಬೆಳ್ತಂಗಡಿ ಠಾಣೆಗೆ ನುಗ್ಗಿ ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಅವ್ಯಾಚ್ಯ ಶಬ್ಧಗಳ ಪ್ರಯೋಗ ಪ್ರಯೋಗಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿಥಿಲಾ ನಿವಾಸದಲ್ಲಿ ಶಾಸಕ ಪೂಂಜಾ ವಾಸವಾಗಿದ್ದಾರೆ.
ಸರ್ಕಲ್ ಇನ್ಸ್ ಪೆಕ್ಟರ್ ಸುಬ್ಬಪೂರ್ ಮಠ್ ಮತ್ತು ಪಿಎಸ್ಐ ಚಂದ್ರಶೇಖರ್ ನೇತೃತ್ವದ ತಂಡ ಇದೀಗ ಶಾಸಕರ ಮನೆಗೆ ಆಗಮಿಸಿದೆ. ಶಾಸಕ ಪೂಂಜಾ ಅವರು ಮನೆಯಲ್ಲಿ ಇದ್ದಾರೆ.
ಇದೇ ವೇಳೆ ಪೊಲೀಸರ ಕ್ರಮಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಕುಮ್ಮಕ್ಕಿನಿಂದ ಶಾಸಕರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭೆಯಲ್ಲಿ ಹರೀಶ್ ಪೂಂಜಾ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ನಿಕಟ ಹಣಾಹಣಿ ನಡೆದಿತ್ತು