Search

Iqbal Ahmed Saradgi Passes Away: ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನಕ್ಕೆ ಡಿಸಿಎಂ ಡಿಕೆಶಿ ಸಂತಾಪ

ಬೆಂಗಳೂರು: ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

“ನಮ್ಮ ಪಕ್ಷದ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರಾಗಿದ್ದ ಸರಡಗಿ ಅವರು ಲೋಕಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಪಾಲಿಕೆ ಸದಸ್ಯ ಸ್ಥಾನದಿಂದ ಲೋಕಸಭಾ ಸದಸ್ಯ ಸ್ಥಾನದವರೆಗೂ ಸುದೀರ್ಘ ರಾಜಕೀಯ ಪಯಣ ಮಾಡಿದ್ದಾರೆ. ಅವರ ಅಗಲಿಕೆ ಪಕ್ಷಕ್ಕೆ ನಷ್ಟ ಎಂದೇ ಭಾವಿಸುತ್ತೇನೆ. ಶಿಕ್ಷಣತಜ್ಞರು, ಪರೋಪಕಾರಿಯಾಗಿ ಗುರುತಿಸಿಕೊಂಡಿರುವ ಸರಡಗಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ.

ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

More News

You cannot copy content of this page